ನವದೆಹಲಿ: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಮುನ್ನಡೆಸಲಿದ್ದಾರೆ.
ಇದೇ ವೇಳೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಡೆಲ್ಲಿ ಕಾಪಿಟಲ್ಸ್ ಫ್ರಾಂಚೈಸಿ ಕ್ರಿಕೆಟ್‌ನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
2019ರಲ್ಲಿ ಡೆಲ್ಲಿ ತಂಡದ ಮೆಂಟರ್ ಆಗಿ ಸೌರವ್ ಗಂಗೂಲಿ ಕಾರ್ಯ ನಿರ್ವಹಿಸಿದ್ದರು.
ಕಳೆದ ವರ್ಷಾಂತ್ಯದಲ್ಲಿ ಕಾರು ಅಪಘಾತದಿಂದ ಪವಾಡ ಸದೃಶ್ಯ ಪಾರಾಗಿದ್ದ ರಿಷಭ್ ಪಂತ್ ಸದ್ಯ ಚೇತರಿಕೆಯ ಹಂತದಲ್ಲಿದ್ದಾರೆ. ಇದರಿಂದಾಗಿ ಐಪಿಎಲ್ ಟೂರ್ನಿಗೆ ಲಭ್ಯರಾಗಿರುವುದಿಲ್ಲ.
ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ಡೆಲ್ಲಿ ತಂಡದ ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ.
ಬಹುನಿರೀಕ್ಷಿತ ಐಪಿಎಲ್ ಟೂರ್ನಿಯು ಮಾರ್ಚ್ 31ರಿಂದ ಆರಂಭವಾಗಲಿದೆ.
2016ರಲ್ಲಿ ವಾರ್ನರ್ ನಾಯಕತ್ವದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಟ್ರೋಫಿ ಜಯಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.