ನವದೆಹಲಿ: ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಅಕ್ಟೋಬರ್ನಲ್ಲಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಅಸಂಭವ ಎನಿಸುತ್ತಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರ ಡೇವಿಡ್ ವಾರ್ನರ್ ಅಭಿಪ್ರಾಪಟ್ಟಿದ್ದಾರೆ.

ಕೊವಿಡ್ –19 ವೈರಸ್ನಿಂದಾಗಿ ಕ್ರಿಕೆಟ್ ಚಟುವಟಿಕೆಗಳು ಸ್ಥಗಿತವಾಗಿವೆ. ಅಕ್ಟೋಬರ್ನಲ್ಲಿ ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಟೂರ್ನಿಯು ಅನಿಶ್ಚಿತವಾಗಿದೆ.ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇನ್ನೂ ಅಂತಿಮ ನಿರ್ಣಯ ಪ್ರಕಟಿಸಿಲ್ಲ.

ಈ ಕುರಿತು ಭಾರತದ ರೋಹಿತ್ ಶರ್ಮಾ ಅವರೊಂದಿಗೆ ನಡೆಸಿದ ಸಂವಾದದಲ್ಲಿ ವಾರ್ನರ್ ಈ ಮಾತು ಹೇಳಿದ್ದಾರೆ.

‘ಆಸ್ಟ್ರೇಲಿಯಾದಲ್ಲಿ ಭಾರತವು ಸರಣಿ ಆಡುವುದು ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಅಮೋಘ ಪುನರಾರಂಭ ನೀಡಿದಂತಾಗುತ್ತದೆ. ಆಸ್ಟ್ರೇಲಿಯಾ ತಂಡದ ಎದುರು ಆಡುವುದೆಂದರೆ ನನಗೆ ಬಹಳ ಇಷ್ಟ. ಹೋದ ವರ್ಷ ಅಲ್ಲಿ ನಾವು ಗೆದ್ದಾಗ ವಾರ್ನರ್ ಮತ್ತು ಸ್ಮಿತ್ ಇರಲಿಲ್ಲ. ಈ ಬಾರಿ ಅವರಿದ್ದಾಗ ಆಡುವುದು ಸವಾಲು’ ಎಂದು ರೋಹಿತ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.