ನವದೆಹಲಿ: ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ಭಾಂಗ್ರಾ ನೃತ್ಯ ಮಾಡುವ ಮೂಲಕ ಆಸ್ಟ್ರೇಲಿಯಾ ತಂಡದ ಪ್ರಮುಖಬ್ಯಾಟರ್ ಡೇವಿಡ್ ವಾರ್ನರ್ ಗಮನ ಸೆಳೆದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ವಾರ್ನರ್, ಸಿನಿಮಾ ಹಾಡುಗಳಿಗೆ ರೀಲ್ಸ್ ಸೇರಿದಂತೆ ನೃತ್ಯ ಮಾಡಿರುವ ವಿಡಿಯೊ ಮತ್ತು ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಪಾಕ್ ಪಂದ್ಯದ ವೇಳೆ ವಾರ್ನರ್ ಮಾಡಿರುವ ನೃತ್ಯದ ವಿಡಿಯೊವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಈ ವಿಡಿಯೊವನ್ನು 13 ಸಾವಿರಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕ್, ಮೊದಲ ಇನ್ನಿಂಗ್ಸ್‌ನಲ್ಲಿ 162 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 476 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು.

477 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ಆಸ್ಟ್ರೇಲಿಯಾ 140.1 ಓವರ್‌ಗಳಲ್ಲಿ 459 ರನ್ ಗಳಿಸಿ ಆಲೌಟ್ ಆಗಿತ್ತು.

ಈ ಮೂಲಕ 17 ರನ್‌ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಪಾಕ್ ಐದನೇ ದಿನದಾಟ ಅಂತ್ಯಕ್ಕೆ 77 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 252 ರನ್ ಗಳಿಸಿದೆ. ಪಂದ್ಯ ಡ್ರಾನಲ್ಲಿ ಮುಕ್ತಾಯಗೊಂಡಿದೆ.

ಓದಿ... IND vs SL: ವಿಕಲಚೇತನ ಅಭಿಮಾನಿಗೆ ವಿರಾಟ್ ಕೊಹ್ಲಿ ಕೊಟ್ಟ ಗಿಫ್ಟ್ ಏನು ಗೊತ್ತಾ?

ಓದಿ...ಪಾಕ್ ನಾಯಕಿಯ ಮಗುವಿನೊಂದಿಗೆ ಮುದ್ದಾಟ: ಸ್ಮೃತಿ ಮಂದಾನ ಭಾವನಾತ್ಮಕ ಪೋಸ್ಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.