ಬುಧವಾರ, ಫೆಬ್ರವರಿ 19, 2020
17 °C

ಡೇವಿಸ್‌ ಕಪ್‌ ಟೆನಿಸ್‌: ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ಹಿಂದೆ ಸರಿದ ಮುಕುಂದ್

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪಾಕಿಸ್ತಾನ ವಿರುದ್ಧ ಡೇವಿಸ್‌ ಕಪ್‌ ಟೆನಿಸ್‌ ಪಂದ್ಯಕ್ಕೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ಭಾರತದ ಶಶಿಕುಮಾರ್‌ ಮುಕುಂದ್‌ ಅವರು ಗಾಯದ ಸಮಸ್ಯೆಯಿಂದಾಗಿ ವಾಪಸ್‌ ಆಗಿದ್ದಾರೆ.

ಪಂದ್ಯವು ಇದೇ 29–30ರಂದು ಕಜಕಿಸ್ತಾನದಲ್ಲಿ ನೂರ್‌–ಸುಲ್ತಾನ್‌ನಲ್ಲಿ ನಡೆಯಬೇಕಿತ್ತು. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆಯಬೇಕಿದ್ದ ಈ ಪಂದ್ಯವನ್ನು ಸುರಕ್ಷತೆ ಹಾಗೂ ಭದ್ರತೆಯ ಕಾರಣದಿಂದಾಗಿ ಕಜಕಿಸ್ತಾನಕ್ಕೆ ಸ್ಥಳಾಂತರಿಸಲಾಗಿತ್ತು.

‘ಈ ಹಿಂದೆ ಪೋರ್ಚುಗಲ್‌ನಲ್ಲಿ ನಡೆದಿದ್ದ ಟೂರ್ನಿಯಲ್ಲಿ ಆಡುವಾಗಲೇ ಅವರ ಪಾದಕ್ಕೆ ಗಾಯವಾಗಿತ್ತು. ಹೀಗಾಗಿ ಅವರು ಪಾಕಿಸ್ತಾನ ಎದುರಿನ ಪಂದ್ಯದಿಂದ ಹಿಂದೆ ಸರಿದಿದ್ದಾರೆ’ ಎಂದು ಡೇವಿಸ್‌ ಕಪ್‌ ತಂಡದ ತರಬೇತುದಾರ ಜೀಶನ್‌ ಅಲಿ ತಿಳಿಸಿದ್ದಾರೆ. ಮುಕುಂದ್‌ ಹಾಗೂ ಪುರವ ರಾಜಾ ಜೋಡಿ ಪೋರ್ಚುಗಲ್‌ನಲ್ಲಿ ಡಬಲ್ಸ್‌ ವಿಭಾಗದಲ್ಲಿ ಕಣಕ್ಕಿಳಿದಿದ್ದಾಗ ಗಾಯವಾಗಿತ್ತು.

ಮುಕುಂದ್‌ ಬದಲು ಎನ್‌. ಶ್ರೀರಾಮ್‌ ಬಾಲಾಜಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆಯಾದರೂ, ಅವರು ಕಜಕಿಸ್ತಾನಕ್ಕೆ ತೆರಳಲು ವೀಸಾ ಸಿಗುವುದು ಕಷ್ಟ ಎನ್ನಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು