ಸೋಮವಾರ, ಡಿಸೆಂಬರ್ 5, 2022
21 °C

ಟಿ20 ವಿಶ್ವಕಪ್: ಇಂಗ್ಲೆಂಡ್‌ ಬ್ಯಾಟರ್‌ ಮಲಾನ್‌ಗೆ ಗಾಯ, ಸೆಮಿಗೆ ಅನುಮಾನ

ಪಿಟಿಐ Updated:

ಅಕ್ಷರ ಗಾತ್ರ : | |

ಅಡಿಲೇಡ್‌ : ಇಂಗ್ಲೆಂಡ್‌ನ ಬ್ಯಾಟರ್‌ ಡೇವಿಡ್‌ ಮಲಾನ್‌ ಅವರು ತೊಡೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದು, ಭಾರತದ ವಿರುದ್ಧ ಸೆಮಿಫೈನಲ್‌ನಲ್ಲಿ ಆಡುವುದು ಅನುಮಾನ.

ಶ್ರೀಲಂಕಾ ಎದುರು ಶನಿವಾರ ನಡೆದ ‘ಸೂಪರ್‌ 12’ ಹಂತದ ತಮ್ಮ ಕೊನೆಯ ಲೀಗ್‌ ಪಂದ್ಯದಲ್ಲಿ ಅವರು ಗಾಯಗೊಂಡಿದ್ದರು. ಫೀಲ್ಡಿಂಗ್‌ ವೇಳೆ ಗಾಯಗೊಂಡಿದ್ದ ಅವರು ಇಂಗ್ಲೆಂಡ್‌ನ ಇನಿಂಗ್ಸ್‌ ವೇಳೆ ಬ್ಯಾಟ್‌ ಮಾಡಲು ಬಂದಿರಲಿಲ್ಲ.

ಭಾರತ– ಇಂಗ್ಲೆಂಡ್‌ ನಡುವಣ ಸೆಮಿ ಪಂದ್ಯ ಗುರುವಾರ ನಡೆಯಲಿದೆ. ಆ ವೇಳೆಗೆ ಮಲಾನ್‌ ಚೇತರಿಸಿಕೊಳ್ಳದಿದ್ದರೆ, ಫಿಲ್‌ ಸಾಲ್ಟ್‌ಗೆ ಅವಕಾಶ ಲಭಿಸುವ ಸಾಧ್ಯತೆಯಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು