ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ 'ಪರ್ಪಲ್ ಕ್ಯಾಪ್' ರೇಸ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹರ್ಷಲ್ ಪಟೇಲ್‌ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆವೇಶ್ ಖಾನ್ ನಿಕಟ ಪೈಪೋಟಿ ಒಡ್ಡುತ್ತಿದ್ದಾರೆ.

ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸಿ ಡೆಲ್ಲಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿರುವ ಆವೇಶ್ ಖಾನ್, ಒಟ್ಟು ವಿಕೆಟ್‌ಗಳ ಸಂಖ್ಯೆಯನ್ನು 21ಕ್ಕೆ ಏರಿಸಿದ್ದಾರೆ.

ಇದನ್ನೂ ಓದಿ:ಅಕ್ಷರ್-ಆವೇಶ್-ಅಶ್ವಿನ್ಗೆ ಗೆಲುವಿನ 'ಶ್ರೇಯಸ್'; ಮುಂಬೈ ಪ್ಲೇ-ಆಫ್ ಹಾದಿ ಕಠಿಣ!

ಐಪಿಎಲ್ 14ನೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಸಾಲಿನಲ್ಲಿ ಅಗ್ರಸ್ಥಾನದಲ್ಲಿರುವ ಹರ್ಷಲ್ ಪಟೇಲ್, ಇದುವರೆಗೆ 11 ಪಂದ್ಯಗಳಲ್ಲಿ 26 ವಿಕೆಟ್‌ಗಳನ್ನು ಪಡೆದಿದ್ದಾರೆ.

ಇದರೊಂದಿಗೆ ಹರ್ಷಲ್ ಬಳಿಕ ಐಪಿಎಲ್ 2021ರಲ್ಲಿ 20ಕ್ಕೂ ಹೆಚ್ಚು ವಿಕೆಟ್ ಗಳಿಸಿದ ಎರಡನೇ ಬೌಲರ್ ಎಂಬ ಖ್ಯಾತಿಗೆ ಆವೇಶ್ ಭಾಜನರಾಗಿದ್ದಾರೆ.

ಹರ್ಷಲ್ ಅವರಂತೆ ಆವೇಶ್ ಕೂಡ ಇನ್ನೂ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿಲ್ಲ. ಅಲ್ಲದೆ ಹರ್ಷಲ್ ಹಾಗೂ ಯಜುವೇಂದ್ರ ಚಾಹಲ್ (23) ಬಳಿಕ ಐಪಿಎಲ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಅನ್‌ಕ್ಯಾಪ್ಡ್ ಬೌಲರ್‌ಗಳ ಸಾಲಿನಲ್ಲಿ ಸಿದ್ಧಾರ್ಥ್ ಕೌಲ್ ಹಾಗೂ ಶ್ರೀನಾಥ್ ಅರವಿಂದ್ ಜೊತೆಗೆ ಜಂಟಿ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.