ಮುಂಬೈ: ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಬುಧವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಪಂದ್ಯವನ್ನು ಕೋವಿಡ್ ಭೀತಿಯ ಕಾರಣ ಪುಣೆಯಿಂದ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.

ಡೆಲ್ಲಿ ತಂಡದ ಆಟಗಾರ, ಸಿಬ್ಬಂದಿ ಸೇರಿದಂತೆ ಐವರಲ್ಲಿ ಕೋವಿಡ್ ದೃಢಪಟ್ಟಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಅಗಲಿದ ಸೋದರಿಯನ್ನು ನೆನೆದು ಹರ್ಷಲ್ ಪಟೇಲ್ ಭಾವುಕ ಸಂದೇಶ

ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಆಸ್ಟ್ರೇಲಿಯಾದ ಆಲ್ರೌಂಡರ್ ಮಿಚೆಲ್ ಮಾರ್ಷ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಂಡದ ನಾಲ್ವರು ನೆರವು ಸಿಬ್ಬಂದಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಬುಧವಾರದ ಪಂದ್ಯಕ್ಕೆ ಪುಣೆಗೆ ಪ್ರಯಾಣಿಸುವ ತಂಡದ ಆಟಗಾರರ ಯೋಜನೆಗೆ ಅಡ್ಡಿಯಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ಡೆಲ್ಲಿ ತಂಡದ ಫಿಸಿಯೊ ಪ್ಯಾಟ್ರಿಕ್ ಫರ್ಹಾರ್ಟ್ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಬಳಿಕ ಅವರು ಪ್ರತ್ಯೇಕವಾಸಕ್ಕೆ ಒಳಗಾಗಿದ್ದರು.

‘ಒಂದು ವೇಳೆ ಯಾರಲ್ಲಾದರೂ ಸೋಂಕು ಪತ್ತೆಯಾಗದೇ ಇದ್ದು, ಮುಚ್ಚಿದ ವಾತಾವರಣದಲ್ಲಿ ಹೆಚ್ಚು ದೂರ ಬಸ್ನಲ್ಲಿ ಪ್ರಯಾಣ ಮಾಡುವ ವೇಳೆ ಸಾಂಕ್ರಾಮಿಕ ಇತರರಿಗೂ ಹರಡಿ ಹೆಚ್ಚಿನ ಸಮಸ್ಯೆ ಆಗುವುದನ್ನು ತಪ್ಪಿಸಲು ಪಂದ್ಯದ ಸ್ಥಳವನ್ನು ಬದಲಾಯಿಸಲಾಗಿದೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

IPL 2022 RR vs KKR: ಬಟ್ಲರ್ ಸೆಂಚುರಿ, ಚಾಹಲ್ ಹ್ಯಾಟ್ರಿಕ್; ರಾಜಸ್ಥಾನ್ಗೆ ಜಯ

ಸೋಂಕು ದೃಢಪಟ್ಟವರನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ. ಅವರೆಲ್ಲ ಎರಡು ಬಾರಿ ನೆಗೆಟಿವ್ ವರದಿ ಬಂದ ಬಳಿಕ ತಂಡದ ಬಯೋಬಬಲ್ ಸೇರಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.