ಬುಧವಾರ, ಡಿಸೆಂಬರ್ 1, 2021
26 °C
ವಿರಾಟ್ ಕೊಹ್ಲಿ ಕುಟುಂಬಕ್ಕೆ ಆನ್‌ಲೈನ್ ಬೆದರಿಕೆ ಪ್ರಕರಣ

Repeat ದೆಹಲಿ ಪೊಲೀಸರಿಗೆ ಮಹಿಳಾ ಆಯೋಗದ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಕುಟುಂಬಕ್ಕೆ  ದುಷ್ಕರ್ಮಿಯೊಬ್ಬ ಆನ್‌ಲೈನ್‌ನಲ್ಲಿ ಬೆದರಿಕೆ ಹಾಕಿದ್ದಾನೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಬೇಕು. ಆರೋಪಿಯನ್ನು ಬಂಧಿಸಬೇಕು ಎಂದು ದೆಹಲಿ ಪೊಲೀಸರಿಗೆ (ಸೈಬರ್ ವಿಭಾಗ)ನೋಟಿಸ್ ಕೂಡ ಜಾರಿ ಮಾಡಿದೆ.  

ಕೊಹ್ಲಿಯವರ ಒಂಬತ್ತು ತಿಂಗಳ ಮಗಳ ಮೇಲೆ ಅತ್ಯಾಚಾರವೆಸಗುವುದಾಗಿ ಬೆದರಿಕೆಯೊಡ್ಡಿದ್ದಾರೆಂದು ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ಎಫ್‌ಐಆರ್‌, ಕೈಗೊಂಡ ಕ್ರಮ, ಆರೋಪಿಗಳ ವಿವರವನ್ನು ನ.8ರ ಒಳಗೆ ನೀಡುವಂತೆ ಮಹಿಳಾ ಆಯೋಗವು ದೆಹಲಿಯ ಸಹಾಯಕ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ತನ್ನ ಮೊದಲೆರಡು ಪಂದ್ಯಗಳಲ್ಲಿ ಸೋತಿದೆ. ಇದರಿಂದಾಗಿ ತಂಡದ ನಾಯಕ ಮತ್ತು ಆಟಗಾರರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ.

‘ಮೊಹಮ್ಮದ್ ಶಮಿಯನ್ನು ಬೆಂಬಲಿಸಿ ಹೇಳಿಕೆ ನೀಡಿದ ನಂತರ ಕೊಹ್ಲಿ ಮೇಲೆ ಟ್ರೋಲಿಗರ ದಾಳಿ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.  ಇದು ಬಹಳ ಗಂಭೀರ ವಿಷಯ. ಕಟ್ಟುನಿಟ್ಟಿನ ಕ್ರಮ ಅಗತ್ಯ’ ಎಂದು ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾಲಿ ಮಳಿವಾಲ್ ಹೇಳಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.