ಮಂಗಳವಾರ, ಫೆಬ್ರವರಿ 18, 2020
27 °C

ದಕ್ಷಿಣ ಆಫ್ರಿಕಾ ತಂಡಕ್ಕೆ ಡಿ ಕಾಕ್‌ ನಾಯಕ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಜೋಹಾನ್ಸ್‌ಬರ್ಗ್‌: ವಿಕೆಟ್‌ ಕೀಪರ್‌ ಕ್ವಿಂಟನ್‌ ಡಿ ಕಾಕ್‌ ಅವರು ದಕ್ಷಿಣ ಆಫ್ರಿಕಾ ಏಕದಿನ ಕ್ರಿಕೆಟ್‌ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ.

ಫೆಬ್ರುವರಿ 4ರಿಂದ ತವರಿನಲ್ಲಿ ನಡೆಯುವ ಇಂಗ್ಲೆಂಡ್‌ ಎದುರಿನ ಮೂರು ಪಂದ್ಯಗಳ ಸರಣಿಯಲ್ಲಿ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ಟೆಸ್ಟ್‌ ಮತ್ತು ಟ್ವೆಂಟಿ–20 ತಂಡದ ನಾಯಕ ಫಾಫ್‌ ಡು ಪ್ಲೆಸಿ ಅವರನ್ನು ಇಂಗ್ಲೆಂಡ್‌ ಎದುರಿನ ಸರಣಿಗೆ ಮಂಗಳವಾರ ಪ್ರಕಟಿಸಲಾಗಿರುವ 15 ಮಂದಿಯ ತಂಡದಿಂದ ಕೈಬಿಡಲಾಗಿದೆ. ವೇಗದ ಬೌಲರ್‌ ಕಗಿಸೊ ರಬಾಡಗೆ ವಿಶ್ರಾಂತಿ ನೀಡಲಾಗಿದೆ.

ತಂಡ ಇಂತಿದೆ: ಕ್ವಿಂಟನ್‌ ಡಿ ಕಾಕ್‌ (ನಾಯಕ), ತೆಂಬಾ ಬವುಮಾ, ಜೊರ್ನ್‌ ಫೋರ್ಟುಯಿನ್‌, ಬ್ಯೂರನ್ ಹೆನ್ರಿಕ್ಸ್‌, ರೀಜಾ ಹೆನ್ರಿಕ್ಸ್‌, ಸಿಸಾಂಡ ಮಗಾಳಾ, ಜನ್ನೆಮನ್‌ ಮಲಾನ್‌, ಡೇವಿಡ್‌ ಮಿಲ್ಲರ್‌, ಆ್ಯಂಡಿಲೆ ಪೆಲುವಾಯೊ, ಲುಂಗಿ ಗಿಡಿ, ತಬ್ರೈಜ್‌ ಶಂಸಿ, ಲುಟೊ ಸಿಪಾಮ್ಲಾ, ಜಾನ್‌ ಸ್ಮಟ್ಸ್‌, ವಾನ್‌ ಡರ್‌ ಡುಸನ್‌ ಮತ್ತು ಕೈಲ್‌ ವೆರಿನ್‌.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು