ಸೋಮವಾರ, ಆಗಸ್ಟ್ 8, 2022
23 °C

ಗಾಯದ ಸಮಸ್ಯೆ: ಶ್ರೀಲಂಕಾ ಎದುರಿನ ಸರಣಿಯಿಂದ ದೀಪಕ್ ಚಾಹರ್, ಸೂರ್ಯಕುಮಾರ್ ಹೊರಕ್ಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಶ್ರೀಲಂಕಾ ವಿರುದ್ಧದ ಟಿ–20 ಸರಣಿಯಿಂದ ಭಾರತ ಕ್ರಿಕೆಟ್ ತಂಡದ ವೇಗಿ ದೀಪಕ್ ಚಾಹರ್ ಮತ್ತು ಬ್ಯಾಟರ್ ಸೂರ್ಯಕುಮಾರ್ ಯಾದವ್ ಹೊರಗುಳಿದಿದ್ದಾರೆ.

ಭಾನುವಾರ ಕೋಲ್ಕತ್ತದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ ಟಿ-20 ಪಂದ್ಯದ ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಅವರು ಮೂಳೆ ಮುರಿತಕ್ಕೆ ಒಳಗಾಗಿದ್ದರೆ, ದೀಪಕ್ ಬೌಲಿಂಗ್ ಸಮಯದಲ್ಲಿ ಬಲಗಾಲಿನ ಮೂಳೆಗೆ ಗಾಯ ಮಾಡಿಕೊಂಡಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಭಾರತದ ಎದುರಿನ ಟಿ20 ಸರಣಿಯ ಮೊದಲ ಪಂದ್ಯವು ಫೆಬ್ರುವರಿ 24ರಂದು ಲಖನೌನಲ್ಲಿ ನಡೆಯಲಿದೆ. ಉಳಿದ ಎರಡು ಪಂದ್ಯಗಳು ಕ್ರಮವಾಗಿ 26 ಮತ್ತು 27ರಂದು ಧರ್ಮಶಾಲಾದಲ್ಲಿ ನಿಗದಿಯಾಗಿವೆ.

ಉಭಯ ಆಟಗಾರರು ಚೇತರಿಕೆಗೆ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳುತ್ತಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಆದರೆ, ಈವರೆಗೆ ಬದಲಿ ಆಟಗಾರರನ್ನು ಘೋಷಿಸಲಾಗಿಲ್ಲ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು