ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪ್ತಿ ಮಿಂಚುಭಾರತಕ್ಕೆ ಜಯ

ದಕ್ಷಿಣ ಆಫ್ರಿಕಾ ವಿರುದ್ಧ ಟ್ವೆಂಟಿ–20 ಕ್ರಿಕೆಟ್ ಸರಣಿ
Last Updated 24 ಸೆಪ್ಟೆಂಬರ್ 2019, 18:55 IST
ಅಕ್ಷರ ಗಾತ್ರ

ಸೂರತ್ (ಪಿಟಿಐ): ಕೇವಲ ಎಂಟು ರನ್‌ ಕೊಟ್ಟು ಮೂರು ವಿಕೆಟ್ ಕಬಳಿಸಿದ ಆಫ್‌ಸ್ಪಿನ್ನರ್ ದೀಪ್ತಿ ಶರ್ಮಾ ಅವರ ಉತ್ತಮ ಬೌಲಿಂಗ್‌ನಿಂದಾಗಿ ಭಾರತ ಮಹಿಳೆಯರ ಕ್ರಿಕೆಟ್ ತಂಡವು ಮಂಗಳವಾರ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 11 ರನ್‌ಗಳಿಂದ ರೋಚಕ ಜಯ ಸಾಧಿಸಿತು. ಐದು ಪಂದ್ಯಗಳ ಸರಣಿಯಲ್ಲಿ 1–0 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ನಾಯಕಿ ಹರ್ಮನ್‌ಪ್ರೀತ್ ಕೌರ್ (43 ರನ್) ಅವರ ಬ್ಯಾಟಿಂಗ್‌ನಿಂದ ಭಾರತ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 130 ರನ್ ಗಳಿಸಿತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ದೀಪ್ತಿ ಶರ್ಮಾ ಪೆಟ್ಟು ಕೊಟ್ಟರು. ಅವರಿಗೆ ಉತ್ತಮ ಜೊತೆ ನೀಡಿದ ರಾಧಾ ಯಾದವ್ ಮತ್ತು ಶಿಖಾ ಪಾಂಡೆ ತಲಾ ಎರಡು ವಿಕೆಟ್ ಗಳಿಸಿದರು. ಇದರಿಂದಾಗಿ ಪ್ರವಾಸಿ ತಂಡವು 19.5 ಓವರ್‌ಗಳಲ್ಲಿ 119 ರನ್‌ಗಳಿಗೆ ಪತನವಾಯಿತು.

ಸಂಕ್ಷಿಪ್ತ ಸ್ಕೋರು: ಭಾರತ: 20 ಓವರ್‌ಗಳಲ್ಲಿ 8ಕ್ಕೆ130 (ಹರ್ಮನ್‌ಪ್ರೀತ್ ಕೌರ್ 43, ಸ್ಮೃತಿ ಮಂದಾನ 23, ಶಬ್ನಮ್ ಇಸ್ಮಾಯಿಲ್ 26ಕ್ಕೆ3, ನಡೈನ್ ಡಿ. ಕ್ಲರ್ಕ್ 10ಕ್ಕೆ2) ದಕ್ಷಿಣ ಆಫ್ರಿಕಾ: 19.5 ಓವರ್‌ಗಳಲ್ಲಿ 119 (ಎಂ ಡು ಪ್ರೀಜ್ 59, ದೀಪ್ತಿ ಶರ್ಮಾ 8ಕ್ಕೆ3, ಶಿಖಾ ಪಾಂಡೆ 18ಕ್ಕೆ2, ರಾಧಾ ಯಾದವ್ 29ಕ್ಕೆ2) ಫಲಿತಾಂಶ: ಭಾರತ ತಂಡಕ್ಕೆ 11 ರನ್‌ ಜಯ. ಪಂದ್ಯದ ಆಟಗಾರ್ತಿ: ದೀಪ್ತಿ ಶರ್ಮಾ. ಸರಣಿಯಲ್ಲಿ 1–0 ಮುನ್ನಡೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT