ದುಬೈ : ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತದ ದೀಪ್ತಿ ಶರ್ಮಾ ಅವರು ಐಸಿಸಿ ಮಹಿಳಾ ಟಿ20 ಬೌಲರ್ಗಳ ರ್ಯಾಂಕಿಂಗ್ನಲ್ಲಿ ನಾಲ್ಕನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಆಲ್ರೌಂಡರ್ಗಳ ವಿಭಾಗದಲ್ಲಿ ಮೂರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಅವರು 5 ಪಂದ್ಯಗಳ ಸರಣಿಯಲ್ಲಿ 7 ವಿಕೆಟ್ ಗಳಿಸಿದ್ದರು. ನಾಲ್ಕನೇ ಪಂದ್ಯದಲ್ಲಿ ಐದು ವಿಕೆಟ್ ಪಡೆದು ಮಿಂಚಿದ್ದರು.

ಐಸಿಸಿ ಮಂಗಳವಾರ ಪ್ರಕಟಿಸಿರುವ ರ್ಯಾಂಕಿಂಗ್ ಪಟ್ಟಿಯಲ್ಲಿ, ಉಪನಾಯಕಿ ಸ್ಮೃತಿ ಮಂದಾನ ಅವರು ಬ್ಯಾಟರ್ಗಳ ವಿಭಾಗದಲ್ಲಿ ಒಂದು ಸ್ಥಾನ ಹಿಂಬಡ್ತಿ ಯೊಂದಿಗೆ ಐದನೇ ಕ್ರಮಾಂಕ ಪಡೆದಿ ದ್ದಾರೆ. ಅವರು ಸರಣಿಯ ಮೊದಲ ಮೂರು ಪಂದ್ಯಗಳಿಂದ 62 ರನ್ ಸಂಪಾದಿಸಿದ್ದರು. ನಾಲ್ಕು ಮತ್ತು ಐದನೇ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

ದಕ್ಷಿಣ ಆಫ್ರಿಕಾ ತಂಡದ ನಾಯಕಿ ಲಾರಾ ವೋಲ್ವಾರ್ಟ್ ಅವರು (786 ಅಂಕ) ಮೂರನೇ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾದ ಜಾರ್ಜಿಯಾ ವೋಲ್ (815) ಹಾಗೂ ಬೆತ್ ಮೂನಿ (788) ಮೊದಲೆರಡು ಸ್ಥಾನದಲ್ಲಿದ್ದಾರೆ. ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರು ಅಗ್ರ 10ರಲ್ಲಿ (10ನೇ ಕ್ರಮಾಂಕ) ಮರಳಿ ಸ್ಥಾನಪಡೆದಿದ್ದಾರೆ.

ವೋಲ್ವಾರ್ಟ್ ಅವರು ಒಂದು ಶತಕವೂ ಸೇರಿ ಸರಣಿಯಲ್ಲಿ 330 ರನ್ ಗಳಿಸಿದ್ದರು. ಇದು, ಮಹಿಳಾ ತಂಡಗಳ ದ್ವಿಪಕ್ಷೀಯ ಸರಣಿಯಲ್ಲಿ ಬ್ಯಾಟರ್ವೊಬ್ಬರು ಗಳಿಸಿದ ಅತಿ ಹೆಚ್ಚಿನ ರನ್.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-51-638471468

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.