ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಮಹಿಳಾ ಟಿ20 ಕ್ರಿಕೆಟ್ ರ‍್ಯಾಂಕಿಂಗ್‌: ಎರಡನೇ ಸ್ಥಾನಕ್ಕೆ ದೀಪ್ತಿ ಶರ್ಮಾ

Published 30 ಜನವರಿ 2024, 12:24 IST
Last Updated 30 ಜನವರಿ 2024, 12:24 IST
ಅಕ್ಷರ ಗಾತ್ರ

ದುಬೈ: ಭಾರತದ ದೀಪ್ತಿ ಶರ್ಮಾ ಮಂಗಳವಾರ ಬಿಡುಗಡೆಯಾದ ಐಸಿಸಿ ಮಹಿಳಾ ಟಿ20 ಕ್ರಿಕೆಟ್ ರ‍್ಯಾಂಕಿಂಗ್‌  ಬೌಲಿಂಗ್ ವಿಭಾಗದಲ್ಲಿ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. 

ತಂಡದ ಮತ್ತೊಬ್ಬ ಆಟಗಾರ್ತಿ ರೇಣುಕಾ ಸಿಂಗ್ ಅವರೂ 10ನೇ ಸ್ಥಾನಕ್ಕೇರಿದ್ದಾರೆ.

ದಕ್ಷಿಣ ಆಫ್ರಿಕಾದ ಸ್ಪಿನ್ನರ್ ನಾನ್‌ಕುಲುಲೆಕೊ ಮಲಾಬಾ ಅವರು ಮೂರು ಸ್ಥಾನಗಳ ಕುಸಿತ ಕಂಡಿದ್ದಾರೆ. ಅದರಿಂದಾಗಿ ಮೂರನೇ ಸ್ಥಾನದಲ್ಲಿದ್ದ ದೀಪ್ತಿ ಅವರಿಗೆ ಒಂದು ಸ್ಥಾನ ಬಡ್ತಿ ಸಿಕ್ಕಿದೆ. ದೀಪ್ತಿ ಜೊತೆಗೆ ಪಾಕಿಸ್ತಾನದ ಸಾದಿಯಾ ಇಕ್ಬಾಲ್ ಅವರೂ ಎರಡನೇ ಸ್ಥಾನ ಹಂಚಿಕೊಂಡಿದ್ದಾರೆ.

ಇಂಗ್ಲೆಂಡ್ ತಂಡದ ಸ್ಪಿನ್ನರ್ ಸೋಫಿ ಎಕ್ಸೆಲೆಸ್ಟೋನ್ ಅವರು ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

ಆಲ್‌ರೌಂಡರ್ ವಿಭಾಗದಲ್ಲಿ ದೀಪ್ತಿ ನಾಲ್ಕನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಬ್ಯಾಟರ್‌ಗಳಲ್ಲಿ ಭಾರತದ ಉಪನಾಯಕಿ ಸ್ಮತಿ ಮಂದಾನ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಜೆಮಿಜಾ ರಾಡ್ರಿಗಸ್, ಶಫಾಲಿ ವರ್ಮಾ ಮತ್ತು ಹರ್ಮನ್‌ಪ್ರೀತ್ ಕೌರ್ ಅವರೂ ಕ್ರಮವಾಗಿ 13, 16 ಮತ್ತು 17ನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾದ ಬೆಥ್ ಮೂನಿ ಅವರು ತಮ್ಮ ಸಹ ಆಟಗಾರ್ತಿ ತಹಲಿಯಾ ಮೆಕ್‌ಗ್ರಾ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT