ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಲ್ಲಿ ಕ್ಯಾಪಿಟಲ್ಸ್‌ಗೆ ಗಂಗೂಲಿ ಸಲಹೆಗಾರ

Last Updated 14 ಮಾರ್ಚ್ 2019, 20:34 IST
ಅಕ್ಷರ ಗಾತ್ರ

ನವದೆಹಲಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಕ್ರಿಕೆಟ್‌ನಲ್ಲಿ ಆಡುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಲಹೆಗಾರರನ್ನಾಗಿ ಹಿರಿಯ ಕ್ರಿಕೆಟಿಗ ಸೌರವ್ ಗಂಗೂಲಿ ಅವರನ್ನು ನೇಮಕ ಮಾಡಲಾಗಿದೆ. ಅವರು ಮುಖ್ಯ ಕೋಚ್‌ ರಿಕಿ ಪಾಂಟಿಂಗ್ ಜೊತೆಗೂಡಿ ಕಾರ್ಯನಿರ್ವಹಿಸಲಿದ್ದಾರೆ.

‘ಜಿಂದಾಲ್ ಮತ್ತು ಜೆಎಸ್‌ಡಬ್ಲ್ಯು ಸಂಸ್ಥೆಯ ಕ್ರೀಡಾ ಪ್ರೇಮದ ಬಗ್ಗೆ ಅನೇಕ ವರ್ಷಗಳಿಂದ ತಿಳಿದಿದ್ದೇನೆ. ಇಂಥ ಸಂಸ್ಥೆಯೊಂದಿಗೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ತಂಡದ ಆಟಗಾರರು ಮತ್ತು ಸಿಬ್ಬಂದಿಯನ್ನು ಸದ್ಯದಲ್ಲೇ ಭೇಟಿಯಾಗಲಿದ್ದೇನೆ’ ಎಂದು ಗಂಗೂಲಿ ತಿಳಿಸಿದರು.

ಶ್ರೇಯಸ್ ಅಯ್ಯರ್‌ ನಾಯಕತ್ವದ ಡೆಲ್ಲಿ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ಧ ಸೆಣಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT