ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಜಿತ್ ಅಗರ್ಕರ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸಹಾಯಕ ಕೋಚ್ ಆಗಿ ನೇಮಕವಾಗಿದ್ದಾರೆ.

ಗುರುವಾರ ಲಖನೌನಲ್ಲಿ ನಡೆಯಲಿರುವ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಣ ಟಿ20 ಪಂದ್ಯದಲ್ಲಿ ಅಜಿತ್ ಅವರು ಟಿವಿಗೆ ವೀಕ್ಷಕ ವಿವರಣೆಗಾರರಾಗಿ ಕಾರ್ಯನಿರ್ವಹಿಸುವರು. ಶುಕ್ರವಾರದಿಂದ ಡೆಲ್ಲಿ ತಂಡವನ್ನು ಸೇರಿಕೊಳ್ಳುವರು.

‘ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿ ಆಡಲು ಸಂತಸವಾಗುತ್ತಿದೆ. ನಾಯಕ ರಿಷಭ್ ಪಂತ್ ಮತ್ತು ಕೋಚ್ ರಿಕಿ ಪಾಂಟಿಂಗ್ ಅವರೊಂದಿಗೆ ಕಾರ್ಯನಿರ್ವಹಿಸುವುದು ವಿಭಿನ್ನ ಅನುಭವವಾಗಲಿದೆ’ ಎಂದು 44 ವರ್ಷದ ಅಜಿತ್ ಹೇಳಿದ್ದಾರೆ.

ಡೆಲ್ಲಿ ತಂಡದಲ್ಲಿ ಪ್ರವೀಣ ಆಮ್ರೆ ಸಹಾಯಕ ಕೋಚ್ ಮತ್ತು ಜೇಮ್ಸ್ ಹೋಪ್ಸ್ ಬೌಲಿಂಗ್ ಕೋಚ್ ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.