ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2022: ಪೃಥ್ವಿ ಶಾಗೆ ತೀವ್ರ ಜ್ವರ; ಆಸ್ಪತ್ರೆಗೆ ದಾಖಲು

ಅಕ್ಷರ ಗಾತ್ರ

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಬ್ಯಾಟರ್ ಪೃಥ್ವಿ ಶಾ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಸ್ವತಃ ಪೃಥ್ವಿ ಶಾ ಅವರೇ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಸ್‌ನಲ್ಲಿ ಮಾಹಿತಿ ನೀಡಿದ್ದಾರೆ. 'ಆಸ್ಪತ್ರೆಗೆ ದಾಖಲಾಗಿದ್ದು, ಜ್ವರದಿಂದ ಚೇತರಿಸಿಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರ ಶುಭ ಹಾರೈಕೆಗೆ ಧನ್ಯವಾದಗಳು, ಶೀಘ್ರದಲ್ಲೇ ತಂಡಕ್ಕೆ ಮರಳಲಿದ್ದೇನೆ' ಎಂದು ಬರೆದುಕೊಂಡಿದ್ದಾರೆ.

22 ವರ್ಷದ ಪೃಥ್ವಿ ಶಾ, ಕಳೆದ ಪಂದ್ಯದಲ್ಲಿ ಆಡಿರಲಿಲ್ಲ. ತೀವ್ರ ಜ್ವರದ ಹಿನ್ನೆಲೆಯಲ್ಲಿ ಅವರಿಗೆ ವಿಶ್ರಾಂತಿ ಸೂಚಿಸಲಾಗಿತ್ತು ಎಂದು ತಿಳಿದು ಬಂದಿದೆ.

ಡೆಲ್ಲಿ ಪಾಳಯದಲ್ಲಿ ಕೋವಿಡ್ ಪ್ರಕರಣ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಭಾನುವಾರ ಡೆಲ್ಲಿ ತಂಡದ ನೆಟ್ ಬೌಲರ್‌ಗೆ ಕೊರೊನಾ ಸೋಂಕು ತಗುಲಿತ್ತು. ಪರಿಣಾಮ ಆಟಗಾರರೆಲ್ಲ ಪ್ರತ್ಯೇಕವಾಸಕ್ಕೆ ಒಳಗಾಗಿದ್ದರು. ಬಳಿಕ ಪರೀಕ್ಷಾ ವರದಿ ನೆಗೆಟಿವ್ ಬಂದ ಕಾರಣ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯ ನಿಗದಿಯಂತೆ ನಡೆಯಲಿದೆ ಎಂದು ವರದಿಯಾಗಿದೆ.

ಪೃಥ್ವಿ ಶಾ, ಇದುವರೆಗೆ ಒಂಬತ್ತು ಪಂದ್ಯಗಳಲ್ಲಿ 259 ರನ್ ಗಳಿಸಿದ್ದಾರೆ. ಅಲ್ಲದೆ ಡೇವಿಡ್ ವಾರ್ನರ್ ಜೊತೆಗೆ ಉತ್ತಮ ಜೊತೆಯಾಟ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT