ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 14ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡವು 20 ಓವರ್ಗಳ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿದೆ.

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು.

ಆರಂಭಿಕ ಸಾಯಿ ಸುದರ್ಶನ್ ಅವರು 12 ರನ್ ಗಳಿಸಿ ಮುಕೇಶ್ ಕುಮಾರ್ಗೆ ವಿಕೆಟ್ ಒಪ್ಪಿಸಿದರು. ನಂತರ ಒಂದನೇ ವಿಕೆಟ್ಗೆ ಗಿಲ್–ಬಟ್ಲರ್ ಜೋಡಿಯು 60 ರನ್(32 ಎಸೆತ) ಜೊತೆಯಾಟ ಆಡಿದರು. ಬಟ್ಲರ್ 27 ಎಸೆತಗಳಲ್ಲಿ 52 ರನ್ ಗಳಿಸಿ ಕುಲದೀಪ್ ಯಾದವ್ ಎಸೆತದಲ್ಲಿ ಔಟ್ ಆದರು.

ಮೊದಲಿಗೆ ನಿಧಾನಗತಿಯ ಆಟವಾಡಿದ ನಾಯಕ ಶುಭಮನ್ ಗಿಲ್, ಬಟ್ಲರ್ ವಿಕೆಟ್ ಒಪ್ಪಿಸಿದ ನಂತರ ಸ್ಪೋಟಕ ಆಟವಾಡಲು ಆರಂಭಿಸಿದರು. ಮೊದಲ 20 ಎಸೆತಗಳಲ್ಲಿ 26 ರನ್ ಗಳಿಸಿದ್ದರು. ನಂತರ 45 ಎಸೆತಗಳಲ್ಲಿ 4 ಬೌಂಡರಿ, 5 ಸಿಕ್ಸರ್ ಸಹಿತ 70 ರನ್ ಗಳಿಸಿದರು.

ವಾಷಿಂಗ್ಟನ್ ಸುಂದರ್ ಅವರು 55 ರನ್(32 ಎಸೆತ) ಗಳಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಮುಕೇಶ್ ಕುಮಾರ್ 2 ವಿಕೆಟ್, ಕುಲದೀಪ್ ಯಾದವ್ ಹಾಗೂ ಲುಂಗಿ ಗಿಡಿ ತಲಾ ಒಂದು ವಿಕೆಟ್ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.