ಬೆಂಗಳೂರು: ಇಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸೋಲಿಸಿತು.

ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಆರ್‌ಸಿಬಿಗೆ ಆಘಾತ ಕಾದಿತ್ತು. ನಾಯಕ ಫಫ್ ಡು ಪ್ಲೆಸಿಸ್ 6 ರನ್‌ಗೆ ಔಟ್ ಆದರು. 13 ಎಸೆತಗಳಲ್ಲಿ 27 ರನ್ ಸಿಡಿಸಿದ್ದ ವಿರಾಟ್ ಕೊಹ್ಲಿ ಇಶಾಂತ್‌ಗೆ ವಿಕೆಟ್ ಒಪ್ಪಿಸಿದರು.

ಈ ಸಂದರ್ಭ ಸೇರಿಕೊಂಡ ವಿಲ್ ಜ್ಯಾಕ್ಸ್ ಮತ್ತು ರಜತ್ ಪಾಟಿದಾರ್ ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದರು. ಪಾಟಿದಾರ್ 52 ಮತ್ತು ವಿಲ್ ಜ್ಯಾಕ್ಸ್ 41 ರನ್ ಸಿಡಿಸಿದರು.

ಆರ್‌ಸಿಬಿ ಅಂತಿಮವಾಗಿ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 187 ರನ್ ಪೇರಿಸಿತು. ಆದರೆ ಡೆಲ್ಲಿ ತಂಡ ಈ ಗುರಿಯನ್ನು ಮುಟ್ಟಲು ಸಾಧ್ಯವಾಗಲಿಲ್ಲ.

ಡೆಲ್ಲಿ 19.1 ಓವರ್‌ಗಳಲ್ಲಿ 140 ರನ್‌ಗಳಿಗೆ ಆಲೌಟ್ ಆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.