ಶುಕ್ರವಾರ, ಮೇ 20, 2022
22 °C

ಓಮೈಕ್ರಾನ್ ಭೀತಿ ನಡುವೆಯೂ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ಬಹುತೇಕ ಖಚಿತ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಭೀತಿ ನಡುವೆಯೂ ಭಾರತ ಕ್ರಿಕೆಟ್‌ ತಂಡವು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳುವುದು ಬಹುತೇಕ ಖಚಿತವಾಗಿದೆ. ದಕ್ಷಿಣ ಆಫ್ರಿಕಾ ಕ್ರಿಕೆಟ್ ಸಂಸ್ಥೆಯ ಬಯೋಬಬಲ್ ವ್ಯವಸ್ಥೆ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಆಟಗಾರರಿಗೆ ಮನವರಿಕೆ ಮಾಡಿಕೊಟ್ಟಿದ್ದು, ಅವರ ಮನವೊಲಿಸಿದೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಮೂರು ಟೆಸ್ಟ್ ಪಂದ್ಯಗಳು, ಮೂರು ಏಕದಿನ ಪಂದ್ಯಗಳು ಹಾಗೂ ನಾಲ್ಕು ಟ್ವೆಂಟಿ–20 ಪಂದ್ಯಗಳು ಆಯೋಜನೆಯಾಗಿವೆ. ಡಿಸೆಂಬರ್ 17ರಂದು ಜೊಹಾನ್ಸ್‌ಬರ್ಗ್‌ನಲ್ಲಿ ಪಂದ್ಯ ಆರಂಭವಾಗಲಿದೆ.

ಓದಿ: 

ಏಳು ವಾರಗಳ ಪ್ರವಾಸದಲ್ಲಿ ಆಟಗಾರರು ಕಟ್ಟುನಿಟ್ಟಿನ ಬಯೋಬಬಲ್‌ನಲ್ಲಿ ಇರಲಿದ್ದಾರೆ.

‘ನಾವು ದಕ್ಷಿಣ ಆಫ್ರಿಕಾಕ್ಕೆ ಹೋಗಲಿದ್ದೇವೆ. ಇದು ಖಚಿತವಾಗಿದೆ’ ಎಂದು ಬಿಸಿಸಿಐಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟೀಮ್‌ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸದ ಬಗ್ಗೆ ಇಂದು (ಶನಿವಾರ) ನಡೆಯಲಿರುವ ಬಿಸಿಸಿಐ 90ನೇ ವಾರ್ಷಿಕ ಮಹಾಸಭೆಯ ಬಳಿಕ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು