ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಸ್ಥಾನಕ್ಕೆ ದೇವಜಿತ್ ಸೈಕಿಯಾ ಅವರು ಶನಿವಾರ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಪ್ರಭತೇಜ್ ಭಾಟಿಯಾ ಅವರು ಖಜಾಂಚಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸ್ಥಾನಗಳಿಗೆ ಇವರಿಬ್ಬರನ್ನು ಬಿಟ್ಟು ಬೇರೆ ನಾಮಪತ್ರ ಸಲ್ಲಿಕೆಯಾಗಿಲ್ಲ.

ಮಹಾರಾಷ್ಟ್ರದ ನೂತನ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿರುವ ಕಾರಣ ಆಶಿಷ್ ಶೆಲ್ಲಾರ್ ಅವರು ಬಿಸಿಸಿಐ ಖಜಾಂಚಿ ಸ್ಥಾನಕ್ಕೆ ತ್ಯಾಗಪತ್ರ ನೀಡಿದ್ದರು. ತೆರವಾದ ಈ ಸ್ಥಾನಕ್ಕೆ ಛತ್ತೀಸಗಢ ರಾಜ್ಯ ಕ್ರಿಕೆಟ್ ಸಂಘದ ಭಾಟಿಯಾ ನಾಮಪತ್ರ ಸಲ್ಲಿಸಿದ್ದಾರೆ.

ಜಯ್ ಶಾ ಅವರು ಡಿಸೆಂಬರ್ ಒಂದರಂದು ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿಸಿಸಿಐ ಕಾರ್ಯದರ್ಶಿ ಸ್ಥಾನ ತೆರವಾಗಿದ್ದು, ಸೈಕಿಯಾ ಅವರು ಹಂಗಾಮಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರು ಸೈಕಿಯಾ ಅವರನ್ನು ಹಂಗಾಮಿ ಕಾರ್ಯದರ್ಶಿ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದ್ದರು.

ಬಿಸಿಸಿಐ ವೆಬ್ಸೈಟ್ನಲ್ಲಿ ಪ್ರಕಟವಾಗಿರುವ ಚುನಾವಣಾ ವೇಳಾಪಟ್ಟಿಯ ಪ್ರಕಾರ ಈ ಎರಡು ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಶನಿವಾರ ಸಂಜೆ 4 ಗಂಟೆಯವರೆಗೆ ಅವಕಾಶವಿತ್ತು. ಮೂಲಗಳು ಪ್ರಕಾರ ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.