ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ನಲ್ಲಿ ಆಡಲು ಇದು ಸಕಾಲ: ಡಿವಿಲಿಯರ್ಸ್‌

Last Updated 17 ಜನವರಿ 2019, 15:44 IST
ಅಕ್ಷರ ಗಾತ್ರ

ಲಂಡನ್‌: ‘ಪಾಕಿಸ್ತಾನದಲ್ಲಿ ಈಗ ಉತ್ತಮ ವಾತಾವರಣ ನಿರ್ಮಾಣಗೊಂಡಿದೆ. ಹೀಗಾಗಿ ಆ ದೇಶದಲ್ಲಿ ಕ್ರಿಕೆಟ್ ಆಡಲು ತೀರ್ಮಾನಿಸಿದ್ದೇನೆ. ನನ್ನ ನಿರ್ಧಾರ ಹೊಸ ಬದಲಾವಣೆಗೆ ನಾಂದಿ ಹಾಡಬಹುದು. ನನ್ನನ್ನು ನೋಡಿ ಇತರರು ಆ ದೇಶದಲ್ಲಿ ಕ್ರಿಕೆಟ್‌ ಆಡಲು ಮನಸ್ಸು ಮಾಡಬಹುದು’ ಎಂದು ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಎಬಿ ಡಿವಿಲಿಯರ್ಸ್‌ ಹೇಳಿದ್ದಾರೆ.

ಡಿವಿಲಿಯರ್ಸ್‌ ಅವರು ಈ ಬಾರಿಯ ಪಾಕಿಸ್ತಾನ ಸೂಪರ್‌ ಲೀಗ್‌ನಲ್ಲಿ (ಪಿಎಸ್‌ಎಲ್‌) ಆಡಲು ತೀರ್ಮಾನಿಸಿದ್ದಾರೆ. ಮಾರ್ಚ್‌ 9 ಮತ್ತು 10ರಂದು ಲಾಹೋರ್‌ನಲ್ಲಿ ನಡೆಯುವ ಪಂದ್ಯಗಳಲ್ಲಿ ಅಂಗಳಕ್ಕಿಳಿಯಲಿದ್ದಾರೆ.

‘ಐದು ವರ್ಷಗಳ ಹಿಂದಿನ ಪರಿಸ್ಥಿತಿ ಈಗ ಪಾಕಿಸ್ತಾನದಲ್ಲಿಲ್ಲ. ಅಲ್ಲಿ ಕ್ರಿಕೆಟ್‌ ಪಂದ್ಯಗಳನ್ನು ಆಡಲು ಯಾರೂ ಆತಂಕ ಪಡಬೇಕಿಲ್ಲ. ಮಾರ್ಚ್‌ನಲ್ಲಿ ಆ ದೇಶಕ್ಕೆ ಹೋಗಿ ಆಡುತ್ತೇನೆ. ಈ ಮೂಲಕ ಪಾಕಿಸ್ತಾನ ಸುರಕ್ಷಿತ ದೇಶ ಎಂಬುದನ್ನು ಜಗತ್ತಿಗೆ ಸಾರಿ ಹೇಳುತ್ತೇನೆ’ ಎಂದು ಡಿವಿಲಿಯರ್ಸ್‌ ನುಡಿದಿದ್ದಾರೆ.

2009ರಲ್ಲಿ ಶ್ರೀಲಂಕಾ, ಕ್ರಿಕೆಟ್‌ ಸರಣಿ ಆಡಲು ಪಾಕಿಸ್ತಾನಕ್ಕೆ ಹೋಗಿತ್ತು. ಆಗ ಲಾಹೋರ್‌ನಲ್ಲಿ ಲಂಕಾ ಆಟಗಾರರಿದ್ದ ಬಸ್‌ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಆ ಘಟನೆಯ ನಂತರ ಎಲ್ಲಾ ದೇಶಗಳು ಪಾಕ್‌ನಲ್ಲಿ ಕ್ರಿಕೆಟ್‌ ಆಡಲು ನಿರಾಕರಿಸಿದ್ದವು. ಹೀಗಾಗಿ ಪಾಕಿಸ್ತಾನ ತಂಡ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಲ್ಲಿ ದ್ವಿಪಕ್ಷೀಯ ಸರಣಿಗಳನ್ನು ಆಡುತ್ತಿತ್ತು. ಹೋದ ವರ್ಷದ ಏಪ್ರಿಲ್‌ನಲ್ಲಿ ವೆಸ್ಟ್‌ ಇಂಡೀಸ್‌ ತಂಡ ಆ ದೇಶಕ್ಕೆ ಪ್ರವಾಸ ಕೈಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT