ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಸೀಮಿತ ಓವರ್‌ಗಳ ತಂಡಕ್ಕೆ ಧೋನಿ ನಾಯಕ

ದಶಕದ ಟೆಸ್ಟ್ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕತ್ವ
Last Updated 27 ಡಿಸೆಂಬರ್ 2020, 19:30 IST
ಅಕ್ಷರ ಗಾತ್ರ

ದುಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ)ಯ ದಶಕದ ಏಕದಿನ ಮತ್ತು ಟಿ20 ತಂಡಗಳಿಗೆ ನಾಯಕತ್ವದ ಗೌರವ ಗಳಿಸಿದ್ದಾರೆ. ಟೆಸ್ಟ್ ತಂಡಕ್ಕೆ ವಿರಾಟ್ ಕೊಹ್ಲಿ ಆಯ್ಕೆಯಾಗಿದ್ದಾರೆ.

ದಶಕದ ಆಟಗಾರ, ತಂಡದ ಪ್ರಶಸ್ತಿ ಆಯ್ಕೆ ಸಮಿತಿಯು ಈ ತಂಡಗಳನ್ನು ಆಯ್ಕೆ ಮಾಡಿದೆ. ಐಸಿಸಿಯು ಭಾನುವಾರ ಪ್ರಕಟಿಸಿದೆ. ಸೀಮಿತ ಓವರ್‌ಗಳ ತಂಡಗಳಲ್ಲಿ ಭಾರತೀಯರದ್ದೇ ಸಿಂಹಪಾಲು. ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಕೆಲವು ತಿಂಗಳುಗಳ ಹಿಂದೆ ನಿವೃತ್ತಿ ಘೋಷಿಸಿದ್ದಾರೆ.

ದಶಕದ ಟೆಸ್ಟ್ ತಂಡ:ವಿರಾಟ್ ಕೊಹ್ಲಿ (ನಾಯಕ –ಭಾರತ), ಅಲಸ್ಟೇರ್ ಕುಕ್ (ಇಂಗ್ಲೆಂಡ್), ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ), ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್), ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ), ಕುಮಾರ ಸಂಗಕ್ಕಾರ (ಶ್ರೀಲಂಕಾ), ಬೆನ್ ಸ್ಟೋಕ್ಸ್‌ (ಇಂಗ್ಲೆಂಡ್), ಆರ್. ಅಶ್ವಿನ್ (ಭಾರತ), ಡೇಲ್ ಸ್ಟೇಯ್ನ್ (ದಕ್ಷಿಣ ಅಫ್ರಿಕಾ), ಸ್ಟುವರ್ಟ್ ಬ್ರಾಡ್ (ಇಂಗ್ಲೆಂಡ್), ಜೇಮ್ಸ್‌ ಆ್ಯಂಡರ್ಸನ್ (ಇಂಗ್ಲೆಂಡ್).

ಏಕದಿನ ತಂಡ: ಮಹೇಂದ್ರಸಿಂಗ್ ಧೋನಿ (ನಾಯಕ), ರೋಹಿತ್ ಶರ್ಮಾ, ಡೇವಿಡ್ ವಾರ್ನರ್, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಶಕೀಬ್ ಅಲ್ ಹಸನ್, ಬೆನ್ ಸ್ಟೋಕ್ಸ್‌, ಮಿಚೆಲ್ ಸ್ಟಾರ್ಕ್, ಟ್ರೆಂಟ್ ಬೌಲ್ಟ್, ಇಮ್ರಾನ್ ತಾಹೀರ್, ಲಸಿತ್ ಮಾಲಿಂಗ

ಟಿ20 ತಂಡ: ಮಹೇಂದ್ರಸಿಂಗ್ ಧೋನಿ (ನಾಯಕ), ರೋಹಿತ್ ಶರ್ಮಾ, ಕ್ರಿಸ್ ಗೇಲ್, ಆ್ಯರನ್ ಫಿಂಚ್, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೀರನ್ ಪೊಲಾರ್ಡ್, ರಶೀದ್ ಖಾನ್, ಜಸ್‌ಪ್ರೀತ್ ಬೂಮ್ರಾ, ಲಸಿತ್ ಮಾಲಿಂಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT