ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡಲಿ: ಹಿರಿಯ ಕ್ರಿಕೆಟಿಗ ಡೀನ್‌ ಜೋನ್ಸ್‌ ಅಭಿಪ್ರಾಯ

Last Updated 29 ಜೂನ್ 2019, 10:53 IST
ಅಕ್ಷರ ಗಾತ್ರ

ಮುಂಬೈ: ‘ಭಾರತ ತಂಡದ ಅನುಭವಿ ಆಟಗಾರ ಮಹೇಂದ್ರ ಸಿಂಗ್‌ ಧೋನಿ, ವಿಶ್ವಕಪ್‌ನ ಉಳಿದ ಪಂದ್ಯಗಳಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಲಿ’ ಎಂದು ಆಸ್ಟ್ರೇಲಿಯಾದ ಹಿರಿಯ ಕ್ರಿಕೆಟಿಗ ಡೀನ್‌ ಜೋನ್ಸ್‌ ಹೇಳಿದ್ದಾರೆ.

ವಿಕೆಟ್‌ ಕೀಪರ್‌ ಧೋನಿ ಅವರು ಆರಂಭದ ಕೆಲವು ‍ಪಂದ್ಯಗಳಲ್ಲಿ ನಿಧಾನಗತಿಯ ಬ್ಯಾಟಿಂಗ್‌ ಮಾಡಿದ್ದರು. ಈ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.

‘ಭಾರತ ತಂಡವು ಈಗ ಯಶಸ್ಸಿನ ಉತ್ತುಂಗದಲ್ಲಿದೆ. ಈ ಬಾರಿ ಆಡಿರುವ ಎಲ್ಲಾ ಪಂದ್ಯಗಳಲ್ಲೂ ಗೆದ್ದಿದೆ. ನಾಲ್ಕನೇ ಕ್ರಮಾಂಕದಲ್ಲಿ ವಿಜಯ್‌ ಶಂಕರ್‌ ರನ್‌ ಗಳಿಸಲು ಪರದಾಡುತ್ತಿದ್ದಾರೆ. ಅವರ ಬದಲು ಈ ಕ್ರಮಾಂಕದಲ್ಲಿ ಧೋನಿಯವರನ್ನು ಆಡಿಸಬೇಕು. ಜೊತೆಗೆ ರವೀಂದ್ರ ಜಡೇಜ ಅವರಿಗೂ ಆಡುವ ಬಳಗದಲ್ಲಿ ಸ್ಥಾನ ನೀಡುವುದು ಅಗತ್ಯ. ಆಗ ಹೆಚ್ಚುವರಿ ಸ್ಪಿನ್ನರ್‌ ಒಬ್ಬರು ಸಿಕ್ಕಂತಾಗುತ್ತದೆ’ ಎಂದು ಸ್ಟಾರ್‌ ಸ್ಪೋರ್ಟ್ಸ್ ವಾಹಿನಿಗೆ ತಿಳಿಸಿದ್ದಾರೆ.

‘ಇಂಗ್ಲೆಂಡ್‌ನ ಪಿಚ್‌ಗಳಲ್ಲಿ ಎಡಗೈ ಬ್ಯಾಟ್ಸ್‌ಮನ್‌ಗಳು ಸರಾಗವಾಗಿ ರನ್‌ ಗಳಿಸಬಹುದು. ಜಡೇಜಾಗೆ ಅವಕಾಶ ನೀಡಿದರೆ ತಂಡಕ್ಕೆ ಹೆಚ್ಚು ಲಾಭವಾಗಲಿದೆ’ ಎಂದಿದ್ದಾರೆ.

‘ಭಾರತವು ಸೆಮಿಫೈನಲ್‌ ಪ್ರವೇಶಿಸಿದರೆ ಕಠಿಣ ಸವಾಲು ಎದುರಾಗುವುದು ನಿಶ್ಚಿತ. ನಾಲ್ಕರ ಘಟ್ಟದ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್‌ಗಳು ಪತನವಾದರೆ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್‌ಮನ್‌ ಮೇಲೆ ಹೆಚ್ಚಿನ ಹೊರೆ ಬೀಳಲಿದೆ. ದಿನೇಶ್‌ ಕಾರ್ತಿಕ್‌ ಅವರು ಅನುಭವಿ ಆಟಗಾರ. ಒತ್ತಡವನ್ನು ಮೀರಿ ನಿಲ್ಲುವ ಸಾಮರ್ಥ್ಯ ಅವರಿಗಿದೆ. ಹೀಗಾಗಿ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಸುವುದು ಸೂಕ್ತ’ ಎಂದು ಭಾರತದ ಕ್ರಿಕೆಟಿಗ ಇರ್ಫಾನ್‌ ಪಠಾಣ್‌ ಅಭಿಪ್ರಾಯಪಟ್ಟಿದ್ದಾರೆ.

‘ತಂಡದಲ್ಲಿ ಬದಲಾವಣೆ ಮಾಡಲೇಬೇಕು ಎನಿಸಿದರೆ ಅದನ್ನು ಈಗಲೇ ಮಾಡುವುದು ಒಳಿತು. ಸೆಮಿಫೈನಲ್‌ಗೂ ಮುನ್ನ ಬದಲಾವಣೆಗೆ ಕೈ ಹಾಕಿದರೆ ಅದರಿಂದ ತಂಡಕ್ಕೆ ಯಾವುದೇ ಪ್ರಯೋಜನವಾಗುವುದಿಲ್ಲ’ ಎಂದು ಅವರು ನುಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT