ಮಂಗಳವಾರ, ಮಾರ್ಚ್ 31, 2020
19 °C

ಐಪಿಎಲ್‌ನಲ್ಲಿ ಮಿಂಚಿದರಷ್ಟೇ ಧೋನಿಗೆ ಅವಕಾಶ

ಪಿಟಿಐ Updated:

ಅಕ್ಷರ ಗಾತ್ರ : | |

ರಾಜ್‌ಕೋಟ್: ಇಂಡಿಯನ್‌ ಪ್ರೀಮಿಯರ್ ಲೀಗ್‌ (ಐಪಿಎಲ್‌) ಕ್ರಿಕೆಟ್‌ ಟೂರ್ನಿಯಲ್ಲಿ ಸಾಮರ್ಥ್ಯ ತೋರಿದರೆ ಮಾತ್ರ ಮಹೇಂದ್ರ ಸಿಂಗ್ ಧೋನಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗುವುದು ಎಂಬ ನಿರ್ಧಾರಕ್ಕೆ ಬಿಸಿಸಿಐ ಆಯ್ಕೆ ಸಮಿತಿ ಬಂದಿದೆ ಎಂದು ಹೇಳಲಾಗಿದೆ.

ಕರ್ನಾಟಕದ ಸುನಿಲ್ ಜೋಶಿ ಅವರನ್ನು ಕಳೆದ ವಾರವಷ್ಟೇ ಆಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಭಾನುವಾರ ಸಭೆ ಸೇರಿದ ಸಮಿತಿ ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಿತ್ತು. ಧೋನಿ ಅವರನ್ನು ಕೈಬಿಡುವ ಮೂಲಕ ಆಯ್ಕೆ ಸಮಿತಿ ಬದಲಾದರೂ ಧೋನಿ ಕುರಿತ ನಿರ್ಧಾರ ಬದಲಾಗಲಿಲ್ಲ ಎಂಬುದನ್ನು ಸಾಬೀತು ಮಾಡಿತ್ತು.

‘ಧೋನಿ ಬಗ್ಗೆ ಸಭೆಯಲ್ಲಿ ಚರ್ಚೆಯೇ ಆಗಲಿಲ್ಲ. ಐಪಿಎಲ್‌ನಲ್ಲಿ ಉತ್ತಮವಾಗಿ ಆಡಿದರೆ ಮಾತ್ರ ಅವರ ಮುಂದಿನ ಹಾದಿ ಸುಗಮವಾಗಲಿದೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು