ಚೆನ್ನೈ: ಭಾರತ ತಂಡದ ಅನುಭವಿ ಆಟಗಾರ ಮಹೇಂದ್ರ ಸಿಂಗ್ ಧೋನಿ, ಮಂಗಳವಾರ ಚೆನ್ನೈಗೆ ಬಂದಿಳಿದಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್‌ನ ಉಳಿದ ಪಂದ್ಯಗಳು ಮುಂದಿನ ತಿಂಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ನಿಗದಿಯಾಗಿದೆ. ಇದರಲ್ಲಿ ಪಾಲ್ಗೊಳ್ಳುವ ಸಲುವಾಗಿ ನಾಯಕ ಧೋನಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಇತರ ಆಟಗಾರರು ಇದೇ 13ರಂದು ಯುಇಎಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ.
‘ತಂಡದಲ್ಲಿರುವ ಭಾರತ ತಂಡದ ಆಟಗಾರರು ಚೆನ್ನೈನಲ್ಲಿ ನಡೆಯುವ ಸಿದ್ಧತಾ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರು ಇದೇ 13ರಂದು ಯುಎಇಗೆ ಹೋಗುವ ನಿರೀಕ್ಷೆ ಇದೆ’ ಎಂದು ಸಿಎಸ್‌ಕೆ ಸಿಇಒ ಕೆ.ಎಸ್.ವಿಶ್ವನಾಥ್ ತಿಳಿಸಿದ್ದಾರೆ.
ಸೆಪ್ಟೆಂಬರ್ 19ರಂದು ನಡೆಯುವ ಪಂದ್ಯದಲ್ಲಿ ಸಿಎಸ್‌ಕೆ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ. ಧೋನಿ ನೇತೃತ್ವದ ಸಿಎಸ್‌ಕೆ ಸದ್ಯ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಏಳು ಪಂದ್ಯಗಳನ್ನು ಆಡಿರುವ ಈ ತಂಡದ ಖಾತೆಯಲ್ಲಿ 10 ಪಾಯಿಂಟ್ಸ್ ಇವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.