ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL | ಕಾಲಿಗೆ ಗಾಯ ಮಾಡಿಕೊಂಡ ಧೋನಿ ಅಭ್ಯಾಸದಿಂದ ದೂರ: ಗುಜರಾತ್ ವಿರುದ್ಧ ಆಡುವರೇ?

Last Updated 30 ಮಾರ್ಚ್ 2023, 16:30 IST
ಅಕ್ಷರ ಗಾತ್ರ

ಅಹಮದಾಬಾದ್‌: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು, ಶುಕ್ರವಾರ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿರುವ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಅವರು ಆಡುವರೇ ಎಂಬುದರ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.

ಆದರೆ, ನಾಳೆಯ ಪಂದ್ಯದಲ್ಲಿ ಧೋನಿ ಇರಲಿದ್ದಾರೆ ಎಂದಿರುವ ತಂಡದ ಸಿಇಒ ಅಭಿಮಾನಿಗಳ ದುಗುಡ ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.

‌41ರ ಹರೆಯದ ಭಾರತ ತಂಡದ ಮಾಜಿ ನಾಯಕ ಚೆನ್ನೈನಲ್ಲಿ ನಡೆದ ತರಬೇತಿ ವೇಳೆ ಎಡ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಗುರುವಾರ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಅಭ್ಯಾಸದಲ್ಲಿ ಅವರು ಪಾಲ್ಗೊಳ್ಳಲಿಲ್ಲ.

ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್‌ ಅವರನ್ನು ಈ ಬಗ್ಗೆ ಕೇಳಿದಾಗ, ‘ನನ್ನ ಮಟ್ಟಿಗೆ, ಧೋನಿ ಆಡುವುದು ಶೇ 100 ರಷ್ಟು ಖಚಿತ. ಬೇರೆ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ’ ಎಂದು ಹೇಳಿದರು.

ಒಂದು ವೇಳೆ ಧೋನಿ ಆಡದಿದ್ದಲ್ಲಿ, ಡೆವೊನ್ ಕಾನ್ವೇ ಅಥವಾ ಅಂಬಟಿ ರಾಯುಡು ಅವರಲ್ಲಿ ಒಬ್ಬರು ವಿಕೆಟ್ ಕೀಪರ್‌ ಆಗಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT