ಸೋಮವಾರ, ಏಪ್ರಿಲ್ 19, 2021
31 °C

ಎಂ.ಎಸ್.ಧೋನಿ ಭಾರತದ ಪರ ಇನ್ನು ಆಡುವುದು ಅನುಮಾನ: ಹರ್ಭಜನ್ ಸಿಂಗ್

ಎಎಫ್‌ಪಿ Updated:

ಅಕ್ಷರ ಗಾತ್ರ : | |

ನವದೆಹಲಿ: ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಭಾರತದ ಪರ ಇನ್ನು ಆಡಬಹುದೆಂದು ಅನಿಸುತ್ತಿಲ್ಲ ಎಂದು ಕ್ರಿಕೆಟಿಗ ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಏಕದಿನ ಕ್ರಿಕೆಟ್ ವಿಶ್ವಕಪ್ ಬಳಿಕ ಧೋನಿ ಅವರು ಭಾರತದ ಪರ ಯಾವುದೇ ಪಂದ್ಯ ಆಡಿಲ್ಲ. ಇದೀಗ ಕೊರೊನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವುದು ಧೋನಿ ತಂಡಕ್ಕೆ ಮರಳುವ ಕುರಿತಾದ ಅನುಮಾನಗಳು ಹೆಚ್ಚಾಗಲು ಕಾರಣವಾಗಿದೆ. ಈ ವರ್ಷ ನಡೆಯಲಿರುವ ಟಿ20 ಕ್ರಿಕೆಟ್ ವಿಶ್ವಕಪ್‌ಗಿಂತ ಮೊದಲು ನಡೆಯಬೇಕಿದ್ದ ಐಪಿಎಲ್ ಟೂರ್ನಿ ಅನಿರ್ದಿಷ್ಟ ಅವಧಿಗೆ ಮುಂದೂಡಿಕೆಯಾಗಿದೆ. ರದ್ದಾಗುವ ಸಾಧ್ಯತೆಯೂ ಇದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಹರ್ಭಜನ್, ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಧೋನಿಯವರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ. ಐಪಿಎಲ್‌ನಲ್ಲಿ ಉಭಯ ಆಟಗಾರರೂ ಚೆನ್ನೈ ಸೂಪರ್‌ಕಿಂಗ್ಸ್‌ ತಂಡದ ಭಾಗವಾಗಿದ್ದಾರೆ.

‘ಅದು ಅವರಿಗೆ ಬಿಟ್ಟದ್ದು. ಅವರು (ಧೋನಿ) ಮತ್ತೆ ಭಾರತದ ಪರ ಆಡಲು ಬಯಸುತ್ತಾರೆಯೇ ಎಂಬುದನ್ನು ನೀವೇ ತಿಳಿದುಕೊಳ್ಳಬೇಕು’ ಎಂದು ಹರ್ಭಜನ್ ಹೇಳಿದ್ದಾರೆ.

‘ನನಗೆ ತಿಳಿದಿರುವ ಮಟ್ಟಿಗೆ ಅವರು ಮತ್ತೆ ಟೀಂ ಇಂಡಿಯಾ ಜೆರ್ಸಿ ತೊಡುವುದಿಲ್ಲ. ಐಪಿಎಲ್‌ನಲ್ಲಿ ಆಡುತ್ತಾರೆ. ಆದರೆ ಭಾರತ ಪರ 2019ರ ವಿಶ್ವಕಪ್ ಪಂದ್ಯವೇ ಕೊನೆ ಎಂದು ಅವರು ಮೊದಲೇ ನಿರ್ಧರಿಸಿದ್ದಾರೆ ಅನಿಸುತ್ತಿದೆ’ ಎಂದು ಅವರು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು