ರಾಜ್‌ಕೋಟ್: ಶುಕ್ರವಾರ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟರ್ ದಿನೇಶ್ ಕಾರ್ತಿಕ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮೊದಲ ಅರ್ಧಶತಕ ಗಳಿಸಿ ಸಂಭ್ರಮಿಸಿದರು.

37 ವರ್ಷದ ಡಿಕೆ, 27 ಎಸೆತಗಳಲ್ಲಿ 55 ರನ್ ಸಿಡಿಸಿದರು.

2006 ಡಿಸೆಂಬರ್ 1 ರಂದು ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಜೊಹಾನ್ಸ್‌ಬರ್ಗ್‌ನಲ್ಲಿ ತನ್ನ ಮೊದಲ ಟಿ20 ಪಂದ್ಯ ಆಡಿತ್ತು. ಆ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಕೂಡ ಅಂತರರಾಷ್ಟ್ರೀಯ ಟಿ20ಗೆ ಪದಾರ್ಪಣೆ ಮಾಡಿದ್ದರು.

127ರನ್‌ಗಳ ಗುರಿ ನೀಡಿದ್ದ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 6 ವಿಕೆಟ್‌ಗಳ ಜಯ ದಾಖಲಿಸಿತ್ತು. ಆ ಪಂದ್ಯದಲ್ಲಿ ಡಿಕೆ 28 ಬಾಲ್‌ಗಳಿಂದ ಔಟಾಗದೇ 31ರನ್ ಗಳಿಸಿ, ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಹೀಗಾಗಿ ಪಂದ್ಯ ಪುರುಷೋತ್ತಮ ಎನಿಸಿಕೊಂಡಿದ್ದರು.

ವೆಸ್ಟ್‌ಇಂಡೀಸ್ ವಿರುದ್ಧ 2017ರಲ್ಲಿ ನಡೆದ ಪಂದ್ಯದಲ್ಲಿ ಗಳಿಸಿದ್ದ 48(29) ರನ್ ಅವರ ಈ ವರೆಗಿನ ಗರಿಷ್ಠವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.