ಕೋಲ್ಕತ್ತ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 18ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಇದೇ 22 ರಂದು ಕೋಲ್ಕತ್ತದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತ ನೈಟ್ ರೈಟರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಈ ಭಾರಿಯ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ನ ಗ್ಲಾಮರಸ್ ನಟಿ ದಿಶಾ ಪಟಾನಿ ತಮ್ಮ ನೃತ್ಯದ ಮೂಲಕ ಸಮಾರಂಭಕ್ಕೆ ಮೆರುಗು ನೀಡಲಿದ್ದಾರೆ. ಇವರ ಜೊತೆಗೆ ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಶಾಲ್ ಸಂಗೀತ ಸುಧೆ ಹರಿಸಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಕುರಿತ ಮಾಹಿತಿ ಹಂಚಿಕೊಳ್ಳಲಾಗಿದ್ದು, ‘ಐಪಿಎಲ್ಗೆ 18 ವರ್ಷಗಳು ತುಂಬಿದ್ದು, ಹಿಂದೆಂದೂ ಕಾಣದ ಅದ್ಭುತ ಪ್ರದರ್ಶನವನ್ನು ಬಯಸುತ್ತದೆ! ವೇದಿಕೆಯನ್ನು ಬೆಳಗಿಸಲು ದಿಶಾ ಪಟಾನಿಗಿಂತ ಉತ್ತಮರು ಯಾರು? ರೋಮಾಂಚಕ ಉದ್ಘಾಟನಾ ಸಮಾರಂಭವನ್ನು ಮಿಸ್ ಮಾಡಿಸಿಕೊಳ್ಳಬೇಡಿ’ ಎಂದು ಬರೆಯಲಾಗಿದೆ.

ಇದಲ್ಲದೆ, ಗಾಯಕ ಕರಣ್ ಔಜ್ಲಾ ಕೂಡ ಈ ಅದ್ಧೂರಿ ಸಮಾರಂಭದಲ್ಲಿ ಪ್ರದರ್ಶನ ನೀಡುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಕಳೆದ ಋತುವಿನಲ್ಲಿ, ನಟರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಮತ್ತು ಗಾಯಕರಾದ ಸೋನು ನಿಗಮ್ ಮತ್ತು ಎ.ಆರ್. ರೆಹಮಾನ್ ಉದ್ಘಾಟನಾ ಸಮಾರಂಭದಲ್ಲಿ ಪ್ರದರ್ಶನ ನೀಡಿದ್ದರು.

ಈ ಮಧ್ಯೆ, ಕ್ರಿಕೆಟ್ ಅಭಿಮಾನಿಗಳು ಕೆಲವು ಪ್ಲಾನ್ಗಳೊಂದಿಗೆ ಜಿಯೋಹಾಟ್ಸ್ಟಾರ್ನಲ್ಲಿ ಐಪಿಎಲ್ ಅನ್ನು ಉಚಿತವಾಗಿ ವೀಕ್ಷಿಸಬಹುದು ಎಂದು ರಿಲಯನ್ಸ್ ಜಿಯೊ ಘೋಷಿಸಿದೆ.
.IPL 2025: ಕೋಲ್ಕತ್ತದಲ್ಲಿ ನಿಗದಿಯಾಗಿರುವ KKR vs LSG ಪಂದ್ಯ ಮುಂದೂಡಿಕೆ!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.