ಐಪಿಎಲ್ 2026ರ ಫೈನಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಐದು ವಿಕೆಟ್ಗಳಿಂದ ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿದೆ. ತಂಡದ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಹಲವು ಕಡೆ ಪಟಾಕಿ ಸಿಡಿಸಿ, ಮೆರವಣಿಗೆ ನಡೆಸಿ ಅಭಿಮಾನಿಗಳು ಖುಷಿ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಡಿ.ಕೆ. ಶಿವಕುಮಾರ್ ಅವರು ಕಾರಿನಲ್ಲಿ ಸಾಗುತ್ತಾ ಆರ್ಸಿಬಿ ಧ್ವಜ ಬೀಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರು ಆರ್ಸಿಬಿ 2026ರ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ವಿಡಿಯೊ ಹಂಚಿಕೊಳ್ಳಲಾಗುತ್ತಿದೆ.

ಫೇಸ್ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಈ ವಿಡಿಯೊ ವ್ಯಾಪಕವಾಗಿ ಹರಿದಾಡುತ್ತಿದ್ದು, ‘ಆರ್ಸಿಬಿ ಎರಡನೇ ಬಾರಿ ಕಪ್ ಗೆದ್ದ ಬಳಿಕ ನಮ್ಮ ಹೊಸ ಸಿಎಂ ಡಿಕೆಶಿ ಸಂಭ್ರಮಿಸುತ್ತಿದ್ದಾರೆ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ಗಳು ಹರಿದಾಡಿವೆ.

ಈ ವಿಡಿಯೊದ ಸತ್ಯಾಸತ್ಯತೆ ಪರಿಶೀಲಿಸಿದಾಗ, ಅದನ್ನು ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂಬುದು ಕಂಡುಬಂದಿದೆ. ವಿಡಿಯೊವು ಐಪಿಎಲ್ 2026ರದ್ದಲ್ಲ. ಬದಲಾಗಿ, ಇದು ಕಳೆದ ವರ್ಷ ನಡೆದ ಆರ್ಸಿಬಿಯ ವಿಜಯೋತ್ಸವದ ಸಂದರ್ಭದ ದೃಶ್ಯವಾಗಿದೆ.

ವಿಡಿಯೊದ ಪ್ರಮುಖ ದೃಶ್ಯಗಳನ್ನು ಗೂಗಲ್ ಲೆನ್ಸ್ ಮೂಲಕ ಪರಿಶೀಲಿಸಿದಾಗ, ಇದೇ ವಿಡಿಯೊವನ್ನು 2025ರ ಜೂನ್ 4ರಂದು ಅನೇಕ ಮಾಧ್ಯಮಗಳು ತನ್ನ ಯೂಟ್ಯೂಬ್ ಚಾನೆಲ್ನಲ್ಲಿ ಪ್ರಕಟಿಸಿರುವುದು ಕಂಡುಬಂದಿದೆ. ವರದಿಯೊಂದರಲ್ಲಿ, ಆರ್ಸಿಬಿ ತಂಡ ಐಪಿಎಲ್ 2025ರ ಪ್ರಶಸ್ತಿ ಗೆದ್ದು ಬೆಂಗಳೂರಿಗೆ ಆಗಮಿಸಿದ ವೇಳೆ ಡಿ.ಕೆ. ಶಿವಕುಮಾರ್ ಅವರು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಆಟಗಾರರನ್ನು ಸ್ವಾಗತಿಸಿದ್ದಾಗಿ ಉಲ್ಲೇಖಿಸಲಾಗಿದೆ. ಅವರು ಆಟಗಾರರಿಗೆ ಹೂಗುಚ್ಛಗಳನ್ನು ನೀಡಿ ಅಭಿನಂದಿಸಿದ್ದು, ವಿರಾಟ್ ಕೊಹ್ಲಿ ಅವರಿಗೆ ಕನ್ನಡ ಧ್ವಜ ಹಾಗೂ ಆರ್ಸಿಬಿ ಧ್ವಜವನ್ನು ಉಡುಗೊರೆಯಾಗಿ ನೀಡಿದ್ದರು.

ಆ ಸಂದರ್ಭದಲ್ಲೇ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದ ವೇಳೆ ಡಿಕೆ ಶಿವಕುಮಾರ್ ತಮ್ಮ ಕಾರಿನಿಂದ ಆರ್ಸಿಬಿ ಧ್ವಜವನ್ನು ಬೀಸಿದ್ದರು. ಈಗ ವೈರಲ್ ಆಗುತ್ತಿರುವ ದೃಶ್ಯವೂ ಇದೇ ಘಟನೆಯದ್ದಾಗಿದೆ. ಇದರ ಜೊತೆಗೆ, 2025ರ ಜೂನ್ ತಿಂಗಳಲ್ಲೇ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಇದೇ ವಿಡಿಯೊವನ್ನು ಹಂಚಿಕೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.