ಬೆಂಗಳೂರು: ಐಪಿಎಲ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ರಾಂಚೈಸಿಯನ್ನು ಖರೀದಿಸುತ್ತೇನೆ ಎಂಬ ವದಂತಿಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ನಾನು ಹುಚ್ಚನಲ್ಲ ಎಂದಿದ್ದಾರೆ.

ಆರ್ಸಿಬಿ ಫ್ರಾಂಚೈಸಿಯನ್ನು ಖರೀದಿಸುವ ಕುರಿತ ವದಂತಿಗಳಿಗೆ ದೆಹಲಿಯಲ್ಲಿ ಸುದ್ದಿಗಾರರಿಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ‘ನಾನು ರಾಯಲ್ ಚಾಲೆಂಜ್ ವಿಸ್ಕಿ ಕುಡಿಯಲ್ಲ. ನನಗೇಕೆ ಆರ್ಸಿಬಿ ತಂಡ ಬೇಕು’ ಎಂದು ಪ್ರಶ್ನಿಸಿದರು.

ಈ ಕುರಿತಂತೆ ಎಎನ್ಐ ಜೊತೆ ಮಾತನಾಡಿದ ಶಿವಕುಮಾರ್, ‘ಕೆಎಸ್ಸಿಎ ಆಡಳಿತ ಮಂಡಳಿಯ ಭಾಗವಾಗಲು ತಮಗೆ ಆಫರ್ಗಳು ಬಂದಿವೆ. ಆದರೆ, ಇದಕ್ಕೆ ನನ್ನ ಬಳಿ ಸಮಯವಿಲ್ಲ. ನನ್ನ ಶಿಕ್ಷಣ ಸಂಸ್ಥೆಯನ್ನು ನೋಡಿಕೊಳ್ಳಲು ನಮ್ಮ ಕುಟುಂಬದ ಸದಸ್ಯರಿಗೆ ಬಿಟ್ಟಿದ್ದೇನೆ’ ಎಂದು ಹೇಳಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಜೂನ್ 4ರಂದು ನಡೆದ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು.

ಕ್ರೀಡಾಂಗಣದ ಒಳಗೆ ಆರ್ಸಿಬಿ ಆಟಗಾರರ ಜೊತೆ ಕಾಣಿಸಿಕೊಂಡಿದ್ದ ಡಿ.ಕೆ. ಶಿವಕುಮಾರ್, ಟ್ರೋಫಿ ಎತ್ತಿ ಹಿಡಿದು, ಮುತ್ತಿಟ್ಟು ಸಂಭ್ರಮಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.