ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಚ್ ಸ್ಥಾನಕ್ಕೆ ದ್ರಾವಿಡ್ ಅರ್ಜಿ ಸಲ್ಲಿಕೆ: ಗವಾಸ್ಕರ್ ಪ್ರತಿಕ್ರಿಯೆ ಹೀಗಿತ್ತು..

Last Updated 27 ಅಕ್ಟೋಬರ್ 2021, 6:52 IST
ಅಕ್ಷರ ಗಾತ್ರ

ನವದೆಹಲಿ: ‘ಟೀಂ ಇಂಡಿಯಾದ ಮುಖ್ಯ ಕೋಚ್‌ ಸ್ಥಾನಕ್ಕೆ ಇನ್ನು ಮುಂದೆ ಅರ್ಜಿ ಸಲ್ಲಿಸಬೇಕು ಎಂದು ಯಾರೂ ಭಾವಿಸಬೇಡಿ. ಸದ್ಯ ರಾಹುಲ್‌ ದ್ರಾವಿಡ್ ಅರ್ಜಿ ಸಲ್ಲಿಸುವುದು ಕೇವಲ ಔಪಚಾರಿಕವಷ್ಟೆ’... ಇವು ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಆಡಿದ ಮಾತುಗಳು.

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ, ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಆಯ್ಕೆ ಬಹುತೇಕ ಖಚಿತಗೊಂಡಿದೆ. ಹೆಡ್ ಕೋಚ್ ಸ್ಥಾನಕ್ಕಾಗಿ ರಾಹುಲ್ ದ್ರಾವಿಡ್ ಮಂಗಳವಾರ ಬಿಸಿಸಿಐಗೆ ಅರ್ಜಿ ಸಲ್ಲಿಸಿದ್ದಾರೆ. ಈ ನಿರ್ಧಾರವನ್ನು ಸುನಿಲ್ ಗವಾಸ್ಕರ್ ಸ್ವಾಗತಿಸಿದ್ದಾರೆ.

‘ಕೋಚ್ ಸ್ಥಾನಕ್ಕಾಗಿ ಬೇರೆಯವರು ಇನ್ನು ಮುಂದೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ದ್ರಾವಿಡ್‌ ಅವರು ಅಂಡರ್-19 ತಂಡವನ್ನು ಮುನ್ನಡೆಸಿದ ರೀತಿಯನ್ನು ಗಮನಿಸಿದರೆ ಮೈದಾನದ ಒಳಗೆ ಮತ್ತು ಹೊರಗೆ ಆಟಗಾರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅವರಿಗೆ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುವ ಸಾಮರ್ಥ್ಯವಿದೆ. ಹಾಗಾಗಿ ಅವರು ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವುದು ಕೇವಲ ಔಪಚಾರಿಕ ಎಂದು ನಾನು ಭಾವಿಸುತ್ತೇನೆ’ ಎಂದು ಗವಾಸ್ಕರ್ ತಿಳಿಸಿದ್ದಾರೆ.

ದುಬೈಯಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಫೈನಲ್‌ ಪಂದ್ಯದ ಸಂದರ್ಭ ದ್ರಾವಿಡ್ ಬಿಸಿಸಿಐ ಪ್ರಮುಖರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಟಿ–20 ವಿಶ್ವಕಪ್‌ ಮುಗಿದ ಬಳಿಕ ಹಾಲಿ ಹೆಡ್ ಕೋಚ್ ರವಿಶಾಸ್ತ್ರಿ ಅವರ ಅವಧಿ ಕೊನೆಗೊಳ್ಳಲಿದ್ದು, ಆ ಸ್ಥಾನ ತುಂಬುವಂತೆ ಸೌರವ್ ಗಂಗೂಲಿ ಮತ್ತು ಜಯ್ ಶಾ ಅವರು ರಾಹುಲ್ ದ್ರಾವಿಡ್ ಅವರ ಮನವೊಲಿಸಿದ್ದಾರೆ’ ಎಂದು ತಿಳಿದು ಬಂದಿದೆ.

ರಾಹುಲ್ ದ್ರಾವಿಡ್ ಅವರು ಭಾರತ ತಂಡದ ಹೆಡ್ ಕೋಚ್ ಆದ ಬಳಿಕ ವಿವಿಎಸ್ ಲಕ್ಷ್ಮಣ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT