ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲ ಟೆಸ್ಟ್‌: ಭಾರತದ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌ -ಬ್ಯಾಟಿಂಗ್‌ ಆಯ್ಕೆ 

ಮೊದಲ ಟೆಸ್ಟ್‌ ಪಂದ್ಯ
Last Updated 1 ಆಗಸ್ಟ್ 2018, 10:05 IST
ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಮ್‌: ಇಲ್ಲಿ ನಡೆಯುತ್ತಿರುವ ಭಾರತ – ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಸೆಣಸಲಿವೆ.

ಭಾರತದ ಎದುರು ಟಾಸ್‌ ಗೆದ್ದಿರುವ ಜೋ ರೂಟ್‌ ಪಡೆ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಒಂದು ಸಾವಿರ ಟೆಸ್ಟ್‌ ಕ್ರಿಕೆಟ್ ಪಂದ್ಯಗಳನ್ನು ಆಡಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಇಂಗ್ಲೆಂಡ್ ಪಾತ್ರವಾಗುವ ಸಂಭ್ರಮದಲ್ಲಿದೆ.

ಐತಿಹಾಸಿಕ ಹೋರಾಟದಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಜೋ ರೂಟ್ ಮೇಲೆ ನಿರೀಕ್ಷೆ ಹೆಚ್ಚಿದೆ. ಅತಿಥೇಯರ ಗೆಲುವಿನ ಹಾದಿಗೆ ಅಡ್ಡಗೋಡೆಯಾಗಲು ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಸಿದ್ಧವಾಗಿದೆ.

1877ರಲ್ಲಿ ಮೊದಲ ಟೆಸ್ಟ್ ಪಂದ್ಯ ಆಡಿದ್ದ ಇಂಗ್ಲೆಂಡ್, ಜಗತ್ತಿಗೆ ಕ್ರಿಕೆಟ್‌ನ ಸೊಬಗನ್ನು ಪರಿಚಯಿಸಿತ್ತು. ಅಲ್ಲಿಂದ ಇಲ್ಲಿಯವರೆಗೆ ಈ ತಂಡವು ಹಲವು ಸಾಧನೆಗಳನ್ನು ಮಾಡಿದೆ. ತನ್ನದೇ ತವರಿನಲ್ಲಿ ನಡೆಯಲಿರುವ 1000ನೇ ಪಂದ್ಯದಲ್ಲಿ ಗೆದ್ದು ಹೊಸ ಮೈಲುಗಲ್ಲು ಸ್ಥಾಪಿಸಲು ರೂಟ್ ಪಡೆ ತವಕಿಸುತ್ತಿದೆ.

ತಂಡಗಳು ಇಂತಿವೆ
ಭಾರತ:
ವಿರಾಟ್‌ ಕೊಹ್ಲಿ (ನಾಯಕ), ಶಿಖರ್‌ ಧವನ್‌, ಮುರಳಿ ವಿಜಯ್‌, ಕೆ.ಎಲ್‌.ರಾಹುಲ್‌, ಅಜಿಂಕ್ಯ ರಹಾನೆ, ದಿನೇಶ್‌ ಕಾರ್ತಿಕ್‌ (ವಿಕೆಟ್‌ ಕೀಪರ್‌), ಹಾರ್ದಿಕ್‌ ಪಾಂಡ್ಯ, ಆರ್‌.ಅಶ್ವಿನ್‌, ಇಶಾಂತ್‌ ಶರ್ಮಾ, ಉಮೇಶ್‌ ಯಾದವ್‌, ಮೊಹಮ್ಮದ್‌ ಶಮಿ

ಇಂಗ್ಲೆಂಡ್‌: ಜೋ ರೂಟ್‌ (ನಾಯಕ), ಅಲಸ್ಟೇರ್‌ ಕುಕ್‌, ಡೇವಿಡ್‌ ಮಲಾನ್‌, ಜಾನಿ ಬೇಸ್ಟೋವ್‌, ಬೆನ್‌ ಸ್ಟೋಕ್ಸ್‌, ಜೋಸ್‌ ಬಟ್ಲರ್‌, ಸ್ಯಾಮ್‌ ಕರನ್‌, ಆದಿಲ್‌ ರಶೀದ್‌, ಸ್ಟುವರ್ಟ್‌ ಬ್ರಾಡ್‌, ಜೇಮ್ಸ್‌ ಆ್ಯಂಡರ್‌ಸನ್‌

***

**

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT