ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಟೆಸ್ಟ್: ಚೊಚ್ಚಲ ಇನ್ನಿಂಗ್ಸ್‌ನಲ್ಲೇ ಶಫಾಲಿ ವರ್ಮಾ ದಾಖಲೆ

Last Updated 18 ಜೂನ್ 2021, 3:13 IST
ಅಕ್ಷರ ಗಾತ್ರ

ಬ್ರಿಸ್ಟಲ್‌: ಮಹಿಳೆಯರ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡದ ಶಫಾಲಿ ವರ್ಮಾ ಪಾದಾರ್ಪಣೆ ಇನ್ನಿಂಗ್ಸ್‌ನಲ್ಲೇ 96 ರನ್‌ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೊದಲಇನ್ನಿಂಗ್ಸ್‌ನಲ್ಲಿ ಸ್ಮೃತಿ ಮಂದಾನ (78; 155 ಎಸೆತ, 14 ಬೌಂಡರಿ) ಜತೆ ಕ್ರೀಸಿಗಿಳಿದ ಶಫಾಲಿ ವರ್ಮಾ (96; 152 ಎ, 13 ಬೌಂ, 2 ಸಿ) ಚೊಚ್ಚಲ ಪಂದ್ಯದಲ್ಲೇ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಹಿಂದೆ ಈ ದಾಖಲೆ ಸಿ. ಕೌಲ್ ಅವರ ಹೆಸರಲ್ಲಿತ್ತು. ಅವರು 1995ರ ಫೆಬ್ರುವರಿಯಲ್ಲಿ ಚೊಚ್ಚಲ ಟೆಸ್ಟ್ ಇನ್ನಿಂಗ್ಸ್‌ನಲ್ಲಿ 75 ರನ್ ಗಳಿಸಿದ್ದರು.

ಸ್ಮೃತಿ–ಶಫಾಲಿ ಭರ್ಜರಿ ಜೊತೆಯಾಟ: ಸ್ಮೃತಿ ಮಂದಾನ ಹಾಗೂ ಶಫಾಲಿ ವರ್ಮಾ 167 ರನ್‌ಗಳ ಜೊತೆಯಾಟ ನೀಡಿದರು. ಇವರಿಬ್ಬರು ಔಟಾದ ಬಳಿಕ ದಿಢೀರ್ ಪತನ ಕಂಡ ಭಾರತ ಮಹಿಳಾ ತಂಡ ಮೊದಲ ಇನಿಂಗ್ಸ್‌ನಲ್ಲಿ ಆಘಾತಕ್ಕೆ ಒಳಗಾಗಿದ್ದು, 60 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 187 ರನ್ ಗಳಿಸಿದೆ.

ಎರಡನೇ ದಿನವಾದ ಗುರುವಾರ ಇಂಗ್ಲೆಂಡ್‌ ತಂಡ 9 ವಿಕೆಟ್ ಕಳೆದುಕೊಂಡು 396 ರನ್ ಗಳಿಸಿ ಮೊದಲ ಇನಿಂಗ್ಸ್‌ ಡಿಕ್ಲೇರ್ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT