ಭಾನುವಾರ, ಜೂಲೈ 12, 2020
25 °C

ಆಸ್ಟ್ರೇಲಿಯಾ ಇಂಗ್ಲೆಂಡ್ ತಂಡಗಳು ಪಾಕ್‌ನಲ್ಲಿ ಆಡಲಿ: ಸಂಗಕ್ಕಾರ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ಲಂಡನ್: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಪಾಕಿಸ್ತಾನದಲ್ಲಿ ಕ್ರಿಕೆಟ್ ಸರಣಿಗಳನ್ನು ಆಡಲು ತೆರಳಬೇಕು ಎಂದು ಶ್ರೀಲಂಕಾದ ಆಟಗಾರ ಮತ್ತು ಮೆರಿಲ್‌ಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಅಧ್ಯಕ್ಷ ಕುಮಾರ ಸಂಗಕ್ಕಾರ ಹೇಳಿದ್ದಾರೆ.

2009ರಲ್ಲಿ ಲಾಹೋರ್‌ನಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ಭಯೋತ್ಪಾದಕರ ದಾಳಿ ನಡೆದಿತ್ತು. ಆಗಿನಿಂದಲೂ ವಿಶ್ವದ ಪ್ರಮುಖ ತಂಡಗಳು ಪಾಕ್‌ ಪ್ರವಾಸ ಮಾಡಿಲ್ಲ.  ಅಲ್ಲಿಯ ಪರಿಸ್ಥಿತಿಯ ಅವಲೋಕನ ಮಾಡಲು ಸಂಗಕ್ಕಾರ ನೇತೃತ್ವದ ಎಂಸಿಸಿ ಪರಿಶೀಲನಾ ತಂಡವು ಫೆಬ್ರುವರಿಯಲ್ಲಿ ಭೇಟಿ ನೀಡಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಸಂಗಕ್ಕಾರ, ‘ಏಷ್ಯಾದ ಕೆಲವು ತಂಡಗಳು ಅಲ್ಲಿಗೆ ಹೋಗಿ ಆಡುವುದು ದೊಡ್ಡ ವಿಷಯವೇನಲ್ಲ. ಆದರೆ ಅಗ್ರಶ್ರೇಯಾಂಕದಲ್ಲಿರುವ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಪ್ರವಾಸ ಕೈಗೊಳ್ಳಬೇಕು. ಅದಕ್ಕೆ ತಕ್ಕಂತೆ ಭದ್ರತಾ ವ್ಯವಸ್ಥೆಯು ಇರುತ್ತದೆ. ಯಶಸ್ವಿಯಾಗಿ ನಡೆದರೆ ವಿಶ್ವಕ್ಕೆ ಒಂದು ಉತ್ತಮ ಸಂದೇಶ ಹೋಗುತ್ತದೆ. ಆದ್ದರಿಂದ ಅಲ್ಲಿಯ ಕ್ರಿಕೆಟ್‌ ಬೆಳವಣಿಗೆಗೆ ಅನುಕೂಲವಾಗುತ್ತದೆ’ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು