ಶುಕ್ರವಾರ, ಸೆಪ್ಟೆಂಬರ್ 17, 2021
30 °C
ಸಿಬ್ಲಿ ಔಟ್

ಭಾರತ ಎದುರಿನ 3ನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ: ಡೇವಿಡ್ ಮಲಾನ್‌ಗೆ ಸ್ಥಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಂಡನ್: ಭಾರತದ ಎದುರಿನ ಟೆಸ್ಟ್ ಕ್ರಿಕೆಟ್ ಸರಣಿಯ ಮೂರನೇ ಪಂದ್ಯದಲ್ಲಿ ಆಡಲಿರುವ ಇಂಗ್ಲೆಂಡ್ ತಂಡದಲ್ಲಿ ಬ್ಯಾಟ್ಸ್‌ಮನ್ ಡೇವಿಡ್ ಮಲಾನ್ ಅವರಿಗೆ ಸ್ಥಾನ ನೀಡಲಾಗಿದೆ.

ಬುಧವಾರ ಪ್ರಕಟಿಸಲಾಗಿರುವ ತಂಡದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಡಾಮ್ ಸಿಬ್ಲಿ ಸ್ಥಾನ ಕಳೆದುಕೊಂಡಿದ್ದಾರೆ.  ಭುಜದ ನೋವಿನಿಂದ ಬಳಲಿರುವ ಬೌಲರ್ ಮಾರ್ಕ್‌ ವುಡ್ ಅವರನ್ನು 15 ಆಟಗಾರರ ಬಳಗದಲ್ಲಿ ಉಳಿಸಿಕೊಳ್ಳಲಾಗಿದೆ.

ಐದು ಪಂದ್ಯಗಳ ಸರಣಿಯಲ್ಲಿ ಭಾರತವು 1–0 ಮುನ್ನಡೆ ಸಾಧಿಸಿದೆ. ನಾಟಿಂಗ್‌ಹ್ಯಾಮ್‌ನಲ್ಲಿ ನಡೆದಿದ್ದ ಮೊದಲ ಪಂದ್ಯವು ಡ್ರಾ ಆಗಿತ್ತು. ಎರಡನೇ ಪಂದ್ಯದಲ್ಲಿ ಭಾರತ ಜಯಿಸಿತ್ತು.

‘ಡೇವಿಡ್ ಮಲಾನ್ ಅವರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಿರುವುದು ಸಮರ್ಪಕವಾಗಿದೆ. ಅವರು ಎಲ್ಲ ಮಾದರಿಗಳಲ್ಲಿಯೂ ಉತ್ತಮವಾಗಿ ಬ್ಯಾಟಿಂಗ್ ಮಾಡುವ ಸಮರ್ಥರು’ ಎಂದು ಇಂಗ್ಲೆಂಡ್ ತಂಡದ ಮುಖ್ಯ ಕೋಚ್ ಕ್ರಿಸ್ ಸಿಲ್ವರ್‌ವುಡ್ ಹೇಳಿದ್ದಾರೆ.

ಮೂರನೇ ಟೆಸ್ಟ್ ಪಂದ್ಯವು ಇದೇ 25ರಿಂದ ಲೀಡ್ಸ್‌ನಲ್ಲಿ ನಡೆಯಲಿದೆ. 

ತಂಡ: ಜೋ ರೂಟ್ (ನಾಯಕ), ಮೋಯಿನ್ ಅಲಿ, ಜೇಮ್ಸ್ ಆ್ಯಂಡರ್ಸನ್, ಜೊನಾಥನ್ ಬೆಸ್ಟೊ, ರೊರಿ ಬರ್ನ್ಸ್, ಜೊಸ್ ಬಟ್ಲರ್, ಸ್ಯಾಮ್ ಕರನ್, ಹಸೀಬ್ ಹಮೀದ್, ಡ್ಯಾನ್ ಲಾರೆನ್ಸ್, ಸಕೀಬ್ ಮೆಹಮೂದ್, ಡೇವಿಡ್ ಮಲಾನ್, ಕ್ರೆಗ್ ಓವರ್ಟನ್, ಒಲಿ ಪೊಪ್, ಒಲಿ ರಾಬಿನ್ಸನ್, ಮಾರ್ಕ್ ವುಡ್.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು