ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ ಎದುರಿನ ಟ್ವಿಂಟಿ–20 ಸರಣಿ ಇಂಗ್ಲೆಂಡ್‌ಗೆ ಕಠಿಣ ಸವಾಲು

Last Updated 3 ಸೆಪ್ಟೆಂಬರ್ 2020, 16:53 IST
ಅಕ್ಷರ ಗಾತ್ರ

ಸೌತಾಂಪ್ಟನ್: ಕೊರೊನಾ ಕಾಲದ ಕ್ರಿಕೆಟ್‌ನಲ್ಲಿ ಈಗಾಗಲೇ ವೆಸ್ಟ್ ಇಂಡೀಸ್, ಐರ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳ ಎದುರು ಪ್ರತಾಪ ಮೆರೆದಿರುವ ಇಂಗ್ಲೆಂಡ್‌ ತಂಡಕ್ಕೆ ಈಗ ನಿಜವಾದ ಕಠಿಣ ಸವಾಲು ಎದುರಾಗುತ್ತಿದೆ.

ಆಸ್ಟ್ರೇಲಿಯಾ ತಂಡದ ವಿರುದ್ಧ ಸರಣಿ ಆಡಲು ಕಣಕ್ಕಿಳಿಯಲಿದೆ. ಮೂರು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯ ಶುಕ್ರವಾರ ರೋಸ್‌ ಬೌಲ್‌ನಲ್ಲಿ ನಡೆಯಲಿದೆ.

ಏಯಾನ್ ಮಾರ್ಗನ್ ನಾಯಕತ್ವದ ಆತಿಥೇಯ ತಂಡಕ್ಕೆ ಆ್ಯರನ್ ಫಿಂಚ್ ನಾಯಕತ್ವದ ಆಸ್ಟ್ರೇಲಿಯಾ ಸವಾಲು ಒಡ್ಡಲಿದೆ. 12 ದಿನಗಳ ಹಿಂದೆಯೇ ಇಲ್ಲಿಗೆ ಬಂದಿರುವ ಆಸ್ಟ್ರೇಲಿಯಾ ಬಳಗ ಒಂದೆರಡು ದಿನ ಹೊರಾಂಗಣದಲ್ಲಿ ಅಭ್ಯಾಸ ಮಾಡಿದೆ.

ತಂಡಗಳು: ಇಂಗ್ಲೆಂಡ್: ಏಯಾನ್ ಮಾರ್ಗನ್ (ನಾಯಕ), ಮೋಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್‌, ಜಾನಿ ಬೆಸ್ಟೊ, ಸ್ಯಾಮ್ ಬಿಲ್ಲಿಂಗ್ಸ್, ಆದಿಲ್ ರಶೀದ್, ಜೋಫ್ರಾ ಆರ್ಚರ್, ಟಾಮ್ ಕರನ್, ಟಾಮ್ ಬ್ಯಾಂಟನ್, ಜೋಸ್ ಬಟ್ಲರ್ (ವಿಕೆಟ್‌ಕೀಪರ್), ಮಾರ್ಕ್ ವುಡ್.

ಆಸ್ಟ್ರೇಲಿಯಾ: ಆ್ಯರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟೋನಿಸ್, ಡೇನಿಯಲ್ ಸ್ಯಾಮ್ಸ್‌, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಆ್ಯಷ್ಟನ್ ಆಗರ್, ಅಲೆಕ್ಸ್‌ ಕ್ಯಾರಿ (ವಿಕೆಟ್‌ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್‌ಕೀಪರ್), ಸೀನ್ ಅಬಾಟ್, ಜೋಷ್ ಹ್ಯಾಜಲ್‌ವುಡ್, ರಿಲೆ ಮೆರೆಡಿತ್, ಮಿಷೆಲ್ ಸ್ಟಾರ್ಕ್, ಆ್ಯಡಂ ಜಂಪಾ, ಜೋಷ್ ಫಿಲಿಪ್.

ನೇರಪ್ರಸಾರ: ಸೋನಿ ಸಿಕ್ಸ್

ಸಮಯ: ರಾತ್ರಿ 10.30.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT