ನವದೆಹಲಿ: ಭಾರತ ಟೆಸ್ಟ್ ತಂಡದ ನೂತನ ನಾಯಕ ಶುಭಮನ್ ಗಿಲ್ ಅವರಿಗೆ ಇಂಗ್ಲೆಂಡ್ ಸರಣಿಯು ಮಹತ್ವದಾಗಿದ್ದು, ಅವರ ಬ್ಯಾಟಿಂಗ್ ಪ್ರದರ್ಶನ ಮೇಲೆ ನಾಯಕತ್ವದ ಯಶಸ್ಸು ನಿರ್ಧಾರವಾಗಲಿದೆ ಎಂದು ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮಾಜಿ ಸದಸ್ಯ ಸಬಾ ಕರೀಮ್ ಹೇಳಿದ್ದಾರೆ.

ಶುಭಮನ್ ಗಿಲ್ ಅವರು ಉತ್ತಮ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಸ್ಥಿರ ಪ್ರದರ್ಶನ ಹಾಗೂ ಪಂದ್ಯಗಳನ್ನು ಗೆಲ್ಲಿಸಿಕೊಡುವ ಮೂಲಕ ಅತ್ಯುತ್ತಮ ಟೆಸ್ಟ್ ಆಟಗಾರ ಎನ್ನುವುದನ್ನು ನಿರೂಪಿಸಬೇಕಿದೆ ಎಂದರು.

'ಗಿಲ್ ಒಬ್ಬ ಉತ್ತಮ ಬ್ಯಾಟರ್, ಆದರೆ ಅವರು ಟೆಸ್ಟ್ ಆಟಗಾರನಾಗಿ ಇನ್ನೂ ಮಿಂಚ ಬೇಕಿದೆ. ಇದುವರೆಗೂ 32 ಟೆಸ್ಟ್ ಪಂದ್ಯಗಳಲ್ಲಿ ನಾಲ್ಕು ಶತಕ ಸಹಿತ 1,893 ರನ್ ಗಳಿಸಿದ್ದು, ಸರಾಸರಿ 32ರಷ್ಟಿದೆ. ವಿದೇಶಿ ನೆಲದಲ್ಲಿನ ಟೆಸ್ಟ್ ಪಂದ್ಯದಲ್ಲಿ ಇದುವರೆಗೂ ಉತ್ತಮ ಪ್ರದರ್ಶನ ನೀಡುವಲ್ಲಿ ಗಿಲ್ ವಿಫಲರಾಗಿದ್ದಾರೆ ಎಂದು ಹೇಳಿದರು.

ಇಂಗ್ಲೆಂಡ್ ವಿರುದ್ಧದ ಸರಣಿಯು ಅವರ ಬ್ಯಾಟಿಂಗ್ ಜೊತೆಗೆ ನಾಯಕತ್ವಕ್ಕೂ ಪರೀಕ್ಷೆಯಾಗಿದೆ. ಗಿಲ್ ಅದಕ್ಕೆ ಸಿದ್ಧರಾಗಿದ್ದಾರೆ ಎನ್ನುವ ನಂಬಿಕೆಯಿದೆ ಎಂದರು.

ಕರುಣ್ ನಾಯರ್, ಸಾಯಿ ಸುದರ್ಶನ್ ಅವರು ಉತ್ತಮ ಲಯದಲ್ಲಿದ್ದಾರೆ. ಭಾರತ ಟೆಸ್ಟ್ ತಂಡವು ಅನುಭವಿ ಹಾಗೂ ಯುವ ಆಟಗಾರರಿಂದ ಕೂಡಿದ್ದು, ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತವು ಉತ್ತಮ ಪ್ರದರ್ಶನ ನೀಡುವ ಭರವಸೆಯಿದೆ ಎಂದು ಹೇಳಿದರು.

ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಶ್ವಿನ್ ಅವರ ನಿವೃತ್ತಿಯ ನಂತರ ಶುಭಮನ್ ಗಿಲ್ ಅವರನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ನಾಯಕರನ್ನಾಗಿ ಆಯ್ಕೆಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.