ನಾಟಿಂಗ್‌ಹ್ಯಾಮ್: ಇಲ್ಲಿ ನಡೆಯುತ್ತಿರುವ ಅಂತಿಮ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭಾರತಕ್ಕೆ 216 ರನ್‌ಗಳ ಗೆಲುವಿನ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 7 ವಿಕೆಟ್ ನಷ್ಟಕ್ಕೆ 215 ರನ್ ಗಳಿಸುವಲ್ಲಿ ಯಶಸ್ವಿಯಾಗಿದೆ.
ಇಂಗ್ಲೆಂಡ್ ಬ್ಯಾಟರ್ ಡೇವಿಡ್ ಮಲಾನ್ 39 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಐದು ಸಿಕ್ಸರ್‌ಗಳು ಸೇರಿದಂತೆ 77 ರನ್ ಗಳಿಸಿದರು.
ಭಾರತದ ಪರ ಹರ್ಷಲ್ ಪಟೇಲ್ ಮತ್ತು ರವಿ ಬಿಶ್ನೋಯಿ ತಲಾ ಎರಡು ವಿಕೆಟ್ ಕಬಳಿಸಿದರು.
ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಡೆಯುತ್ತಿದೆ.
ಮೂರು ಪಂದ್ಯಗಳ ಸರಣಿಯನ್ನು ಭಾರತ ಈಗಾಗಲೇ 2–0 ಅಂತರದಲ್ಲಿ ಗೆದ್ದುಕೊಂಡಿದೆ.
ನಾಲ್ಕು ಬದಲಾವಣೆ: ಭಾರತ ಈ ಬಾರಿ ನಾಲ್ಕು ಬದಲಾವಣೆ ಮಾಡಿದೆ. ಯುಜುವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಕೈಗಿಡಲಾಗಿದ್ದು, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್, ಅವೇಶ್ ಖಾನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್), ರಿಷಭ್ ಪಂತ್ (ವಿಕೆಟ್ ಕೀಪರ್) ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹಾರ್ದಿಕ್ ಪಟೇಲ್, ರವಿ ಬಿಶ್ನೋಯಿ, ಅವೆಶ್ ಖಾನ್, ಉಮ್ರಾನ್ ಮಲೀಕ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.