ಕ್ರೈಸ್ಟ್ಚರ್ಚ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧ ನಡೆದ ದ್ವಿತೀಯ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಇಂಗ್ಲೆಂಡ್ 65 ರನ್ ಅಂತರದ ಗೆಲುವು ದಾಖಲಿಸಿದೆ.

ಆ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.

ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್, ಫಿಲ್ ಸಾಲ್ಟ್ (85) ಹಾಗೂ ನಾಯಕ ಹ್ಯಾರಿ ಬ್ರೂಕ್ ಬಿರುಸಿನ ಅರ್ಧಶತಕಗಳ (78) ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ 236 ರನ್ಗಳ ಬೃಹತ್ ಮೊತ್ತ ಪೇರಿಸಿತ್ತು.

ಸಾಲ್ಟ್ 56 ಎಸೆತಗಳಲ್ಲಿ 11 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 85 ರನ್ ಗಳಿಸಿದರು. ಅತ್ತ ಬ್ರೂಕ್ 35 ಎಸೆತಗಳಲ್ಲಿ ಆರು ಸಿಕ್ಸರ್ ಹಾಗೂ ಐದು ಬೌಂಡರಿಗಳಿಂದ 78 ರನ್ ಗಳಿಸಿ ಅಬ್ಬರಿಸಿದರು.

ಬೃಹತ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 18 ಓವರ್ಗಳಲ್ಲಿ 171 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. ಟಿಮ್ ಸೀಫರ್ಟ್ 39, ಮಾರ್ಕ್ ಚಾಪ್ಮ್ಯಾನ್ 28 ಹಾಗೂ ನಾಯಕ ಮಿಚೆಲ್ ಸ್ಯಾಂಟ್ನರ್ 36 ರನ್ ಗಳಿಸಿದರು.

ಇಂಗ್ಲೆಂಡ್ ಪರ ಅದಿಲ್ ರಶೀದ್ ನಾಲ್ಕು ವಿಕೆಟ್ ಗಳಿಸಿದರು.

ಟಿ20 ಸರಣಿಯ ಕೊನೆಯ ಪಂದ್ಯ ಆಕ್ಲೆಂಡ್ನಲ್ಲಿ ಅಕ್ಟೋಬರ್ 23ರಂದು ನಡೆಯಲಿದೆ.
.ICC Women's WC | ಹೀದರ್ ಶತಕ, ಸೆಮಿಗೆ ಇಂಗ್ಲೆಂಡ್: ಭಾರತಕ್ಕೆ ಸೋಲು.IND vs AUS: ಮೊದಲ ಏಕದಿನದಲ್ಲಿ ನಡೆಯದ 'ರೋ–ಕೊ' ಆಟ; ಆಸೀಸ್ಗೆ ಸುಲಭ ಗೆಲುವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.