ಸೌತಾಂಪ್ಟನ್: ಕಿಬ್ಬೊಟ್ಟೆ ನೋವಿನಿಂದ ಬಳಲುತ್ತಿರುವ ಇಂಗ್ಲೆಂಡ್‌ನ ವೇಗದ ಬೌಲರ್ ರೀಸ್ ಟೋಪ್ಲಿ ಅವರು ಐರ್ಲೆಂಡ್ ಎದುರಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೆ ಲಭ್ಯರಿಲ್ಲ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಸೋಮವಾರ ತಿಳಿಸಿದೆ. ನಾಲ್ಕು ವರ್ಷಗಳ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ 26 ವರ್ಷದ ಟೋಪ್ಲಿ ಎರಡನೇ ಪಂದ್ಯದ ಐರ್ಲೆಂಡ್ ಇನಿಂಗ್ಸ್‌ನ ಕೊನೆಯ ಎಸೆತದಲ್ಲಿ ವಿಕೆಟ್ ಪಡೆದಿದ್ದರು. ಮೂರನೇ ಮತ್ತು ಅಂತಿಮ ಪಂದ್ಯ ಮಂಗಳವಾರ ನಡೆಯಲಿದ್ದು ಇಂಗ್ಲೆಂಡ್ ಸರಣಿ ಕ್ಲೀನ್ ಸ್ವೀಪ್ ಮಾಡುವ ಬಯಕೆಯೊಂದಿಗೆ ಕಣಕ್ಕೆ ಇಳಿಯಲಿದೆ.

ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಸರಣಿಯ ನಂತರ ಇಂಗ್ಲೆಂಡ್‌ನ ಪ್ರಮುಖ ವೇಗದ ಬೌಲರ್‌ಗಳಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಟೋಪ್ಲಿಗೆ ಅವಕಾಶ ಲಭಿಸಿತ್ತು. ಆರು ಅಡಿ ಏಳು ಇಂಚು ಎತ್ತರದ ಈ ಆಟಗಾರ ಪಂದ್ಯದಲ್ಲಿ ಅವರು ಒಂಬತ್ತು ಓವರ್ ಬೌಲಿಂಗ್ ಮಾಡಿದ್ದರು. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಆರು ವಿಕೆಟ್‌ಗಳಿಂದ ಗೆದ್ದಿದ್ದು ಎರಡನೇ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿದೆ.

ಪಂದ್ಯ ಆರಂಭ: ಸಂಜೆ 6.30 (ಭಾರತೀಯ ಕಾಲಮಾನ)

ನೇರ ಪ್ರಸಾರ: ಸೋನಿ ಸಿಕ್ಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.