ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ನ್ಯೂಜಿಲೆಂಡ್ ಏಕದಿನ ಪಂದ್ಯ: ಶಿಖರ್ ನಾಯಕತ್ವಕ್ಕೆ ಕಿವೀಸ್ ಸವಾಲು

ಏಕದಿನ ವಿಶ್ವಕಪ್‌ಗೆ ಸಿದ್ಧತೆಗೆ ವೇದಿಕೆ: ಭಾರತ–ನ್ಯೂಜಿಲೆಂಡ್ ಏಕದಿನ ಪಂದ್ಯ ಇಂದು
Last Updated 24 ನವೆಂಬರ್ 2022, 19:31 IST
ಅಕ್ಷರ ಗಾತ್ರ

ಆಕ್ಲೆಂಡ್ (ಎಎಫ್‌ಪಿ): ಮುಂದಿನ ವರ್ಷ ಭಾರತದಲ್ಲಿಯೇ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ತಂಡ ಕಟ್ಟುವ ಪ್ರಯೋಗ ನ್ಯೂಜಿಲೆಂಡ್‌ ಅಂಗಳದಿಂದ ಆರಂಭವಾಗಲಿದೆ.

ಶಿಖರ್ ಧವನ್ ನಾಯಕತ್ವದ ಭಾರತ ತಂಡವು ಇಲ್ಲಿ ಮೂರು ಪಂದ್ಯಗಳ ಸರಣಿಯನ್ನು ಆಡಲಿದೆ. ಇದರ ಮೊದಲ ಹಣಾಹಣಿ ಶುಕ್ರವಾರ ನಡೆಯಲಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆ.ಎಲ್. ರಾಹುಲ್ ಸೇರಿದಂತೆ ಅನುಭವಿಗಳು ವಿಶ್ರಾಂತಿ ಪಡೆದಿದ್ದಾರೆ. ಇತ್ತೀಚೆಗಷ್ಟೇ ಕಿವೀಸ್‌ ಎದುರು ಭಾರತ ಗೆದ್ದ ಟಿ20 ಸರಣಿಯಲ್ಲಿ ನಾಯಕತ್ವ ವಹಿಸಿದ್ದ ಹಾರ್ದಿಕ್ ಪಾಂಡ್ಯ ಕೂಡ ಈ ಸರಣಿಯಲ್ಲಿ ಆಡುತ್ತಿಲ್ಲ.

ಯುವ ಆಟಗಾರರಾದ ಶುಭಮನ್ ಗಿಲ್, ದೀಪಕ್ ಹೂಡಾ, ವೇಗಿ ಉಮ್ರಾನ್ ಮಲಿಕ್ ಅವರಿಗೆ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಅವಕಾಶ ಸಿಗುವ ನಿರೀಕ್ಷೆ ಇದೆ. ಇಬ್ಬರು ವಿಕೆಟ್‌ಕೀಪರ್‌ಗಳಿಗೆ ಈ ತಂಡದಲ್ಲಿ ಸ್ಥಾನ ನೀಡಲಾಗಿದೆ. ಕೀಪಿಂಗ್ ಮತ್ತು ಬ್ಯಾಟಿಂಗ್‌ ಎರಡರಲ್ಲೂ ಮಿಂಚುವ ಸವಾಲು ರಿಷಭ್ ಪಂತ್ ಹಾಗೂ ಸಂಜು ಸ್ಯಾಮ್ಸನ್ ಅವರ ಮುಂದಿದೆ. ಕೇರಳದ ಸಂಜು ಈ ಹಿಂದೆಯೂ ಉತ್ತಮವಾಗಿ ಆಡಿದ್ದರು. ಆದರೂ

ಶಿಖರ್ ಕಳೆದ ಎರಡು ವರ್ಷಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ 1000 ರನ್‌ಗಳನ್ನು ಗಳಿಸಿದ್ದಾರೆ. ಅವರನ್ನು ಈ ಮಾದರಿಗೆ ಮಾತ್ರ ಆಯ್ಕೆ ಮಾಡಲಾಗುತ್ತಿದೆ. ಟಿ20 ಹಾಗೂ ಟೆಸ್ಟ್‌ಗಳಿಗೆ ಪರಿಗಣಿಸಿಲ್ಲ. ಸೂರ್ಯಕುಮಾರ್ ಯಾದವ್ ಟಿ20 ಮಾದರಿಯಿಂದ 50 ಓವರ್‌ಗಳ ಮಾದರಿಯಲ್ಲಿಯೂ ತಮ್ಮ ಅಬ್ಬರದ ಆಟವನ್ನು ಮುಂದುವರಿಸುವ ಹುಮ್ಮಸ್ಸಿನಲ್ಲಿದ್ದಾರೆ.

ಆರ್ಷದೀಪ್ ಸಿಂಗ್ ಅವರಿಗೆ ತಮ್ಮ ಸ್ವಿಂಗ್ ಚಾತುರ್ಯ ಮೆರೆಯಲು ಮತ್ತೊಂದು ಅವಕಾಶ ಸಿಗಲಿದೆ.

ಕೇನ್ ವಿಲಿಯಮ್ಸನ್ ನಾಯಕತ್ವದ ಆತಿಥೇಯ ಬಳಗವು ಟಿ20 ಸರಣಿಯಲ್ಲಿ ಆಡಿದ್ದ ತಂಡವನ್ನೇ ಉಳಿಸಿಕೊಂಡಿದೆ. ತವರಿನಲ್ಲಿಯೇ ಚುಟುಕು ಸರಣಿಯನ್ನು ಸೋತಿರುವ ಹತಾಶೆಯಲ್ಲಿರುವ ಕಿವೀಸ್ ಬಳಗವು ಮುಯ್ಯಿ ತೀರಿಸಿಕೊಳ್ಳಲು ಸಿದ್ಧವಾಗಿದೆ.

ತಂಡಗಳು: ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್‌ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ದೀಪಕ್ ಹೂಡಾ, ಶಹಬಾಜ್ ಅಹಮದ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ದೀಪಕ್ ಚಾಹರ್, ಆರ್ಷದೀಪ್ ಸಿಂಗ್, ಶಾರ್ದೂಲ್ ಠಾಕೂರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೆ, ಟಾಮ್ ಲಥಾಮ್, ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಬ್ರೇಸ್‌ವೆಲ್, ಟಿಮ್ ಸೌಥಿ, ಮ್ಯಾಟ್ ಹೆನ್ರಿ, ಆ್ಯಡಂ ಮಿಲ್ನೆ, ಜಿಮ್ಮಿ ನಿಶಾಮ್, ಮಿಚೆಲ್ ಸ್ಯಾಂಟನರ್, ಲಾಕಿ ಫರ್ಗ್ಯುಸನ್

ಪಂದ್ಯ ಆರಂಭ: ಬೆಳಿಗ್ಗೆ 7

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT