ಶುಕ್ರವಾರ, ಜನವರಿ 21, 2022
30 °C

2024ರ ಟಿ20 ವಿಶ್ವಕಪ್‌ಗೆ ಅಮೆರಿಕ ಆತಿಥ್ಯ?

ಪಿಟಿಐ Updated:

ಅಕ್ಷರ ಗಾತ್ರ : | |

ಸಿಡ್ನಿ: 2024ರ ಟಿ20 ಕ್ರಿಕೆಟ್‌ ವಿಶ್ವಕಪ್ ಟೂರ್ನಿಗೆ ಅಮೆರಿಕ ಆತಿಥ್ಯ ವಹಿಸುವ ಸಾಧ್ಯತೆಯಿದೆ. 2028ರ ಲಾಸ್‌ ಎಂಜಲೀಸ್‌ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆಗೊಳಿಸಲು ಉದ್ದೇಶಿಸಿರುವ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್ (ಐಸಿಸಿ) ವಿಶ್ವಕಪ್‌ ಟೂರ್ನಿಯನ್ನು ವೇದಿಕೆಯನ್ನಾಗಿ ಬಳಸಿಕೊಳ್ಳುವ ಸಾಧ್ಯತೆಯಿದೆ.

ಅಮೆರಿಕ ಕ್ರಿಕೆಟ್‌ ಹಾಗೂ ವೆಸ್ಟ್ ಇಂಡೀಸ್‌ ಕ್ರಿಕೆಟ್‌ ಮಂಡಳಿಗಳಿಂದ ಬರುವ ಜಂಟಿ ಬಿಡ್‌ಗೆ ಐಸಿಸಿಯು ಟೂರ್ನಿ ಆಯೋಜನೆಯ ಹಕ್ಕು ನೀಡುವ ನಿರೀಕ್ಷೆಯಿದೆ.

‘ಐಸಿಸಿ ಟೂರ್ನಿಗಳನ್ನು ಆಯೋಜಿಸುವ ತಾಣಗಳನ್ನು ನಿರ್ಧರಿಸುವ ಕಾಲ ಸನ್ನಿಹಿತವಾಗಿದೆ. ವಿಶ್ವದಾದ್ಯಂತ ಕ್ರಿಕೆಟ್‌ಅನ್ನು ವ್ಯಾಪಕವಾಗಿ ವಿಸ್ತರಿಸುವ ಉದ್ದೇಶವನ್ನು ಮಂಡಳಿ ಹೊಂದಿದೆ‘ ಎಂದು ‘ಸಿಡ್ನಿ ಮಾರ್ನಿಂಗ್ ಹೆರಾಲ್ಡ್‘ ತನ್ನ ವರದಿಯಲ್ಲಿ ಹೇಳಿದೆ.

ಎಲ್ಲವೂ ಯೋಜನೆಗಳ ಪ್ರಕಾರ ನಡೆದರೆ, 2014ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಟಿ20 ವಿಶ್ವಕಪ್ ಬಳಿಕ ಭಾರತ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಆತಿಥ್ಯ ವಹಿಸದ ಮೊದಲ ಟೂರ್ನಿಯಾಗಲಿದೆ.

2024ರ ಟಿ20 ಟೂರ್ನಿಯಲ್ಲಿ 20 ತಂಡಗಳು 55 ಪಂದ್ಯಗಳನ್ನು ಆಡುವ ನಿರೀಕ್ಷೆಯಿದೆ. 2021 ಮತ್ತು 2022ರ ಆವೃತ್ತಿಗಳಲ್ಲಿ 16 ತಂಡಗಳು 45 ಪಂದ್ಯಗಳನ್ನು ಆಡಿವೆ; ಆಡಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು