ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾ ಕ್ರಿಕೆಟ್ ಲೀಗ್: ಜೋಬರ್ಗ್‌ ಸೂಪರ್ ಕಿಂಗ್ಸ್‌ಗೆ ಡುಪ್ಲೆಸಿ ನಾಯಕ

Last Updated 1 ಸೆಪ್ಟೆಂಬರ್ 2022, 19:30 IST
ಅಕ್ಷರ ಗಾತ್ರ

ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್‌ ಫ್ರ್ಯಾಂಚೈಸಿಯು ದಕ್ಷಿಣ ಆಫ್ರಿಕಾ ಕ್ರಿಕೆಟ್ ಲೀಗ್ ಟೂರ್ನಿಯಲ್ಲಿ ಆಡಲಿರುವ ತನ್ನ ತಂಡಕ್ಕೆ ಜೋಬರ್ಗ್ ಸೂಪರ್ ಕಿಂಗ್ಸ್‌ (ಜೆಎಸ್‌ಕೆ) ಎಂದು ನಾಮಕರಣ ಮಾಡಿದೆ.

ಈ ತಂಡಕ್ಕೆ ದಕ್ಷಿಣ ಆಫ್ರಿಕಾ ತಂಡದ ಮಾಜಿ ಆಟಗಾರ ಹಾಗೂ ರಾಯಲ್ ಚಾಲೆಂಜರ್ಸ್ ತಂಡದ ನಾಯಕ ಫಫ್ ಡುಪ್ಲೆಸಿ ನಾಯಕತ್ವವಹಿಸುವರು. ಸ್ಟೀಫನ್ ಫ್ಲೆಮಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುವರು. ಗುರುವಾರ ನಡೆದ ಸಂವಾದದಲ್ಲಿ ಈ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಿಎಸ್‌ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್. ವಿಶ್ವನಾಥನ್, ಲೀಗ್ ಕಮಿಷನರ್ ಗ್ರೆಮ್ ಸ್ಮಿತ್, ಡುಪ್ಲೆಸಿ, ವಾಂಡರರ್ಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೊನೊ ಲೀಫ್ ರೈಟ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT