ನವದೆಹಲಿ:ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ(ಐಪಿಎಲ್) ಎಂಟು ವರ್ಷಗಳನ್ನು ಪೂರೈಸಿರುವ ಭಾರತ ಕ್ರಿಕೆಟ್ ತಂಡದ ಪ್ರಮುಖ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರು ನಿನ್ನೆಯಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೂಮ್ರಾ 2013ರ ಏಪ್ರಿಲ್4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಪದಾರ್ಪಣೆ ಮಾಡಿದ್ದರು. ಇನಿಂಗ್ಸ್‌ನ 5ನೇ ಓವರ್‌ನಲ್ಲಿ ಬೌಲಿಂಗ್ ಮಾಡಿದ ಬೂಮ್ರಾ ಮೊದಲ ನಾಲ್ಕು ಎಸೆತಗಳಲ್ಲಿ ಮೂರು ಬೌಂಡರಿ ಬಾರಿಸಿದ್ದ ಆರ್‌ಸಿಬಿ ನಾಯಕ ವಿರಾಟ್ ಅವರನ್ನು ಐದನೇ ಎಸೆತದಲ್ಲಿ ಎಲ್‌ಬಿ ಬಲೆಗೆ ಬೀಳಿಸಿದ್ದರು.

ಮೊದಲ ಪಂದ್ಯದಲ್ಲಿ ನಾಲ್ಕು ಓವರ್ ಎಸೆದಿದ್ದ ಅವರು 32ರನ್ ನೀಡಿ ಪ್ರಮುಖ ಮೂರು ವಿಕೆಟ್ ಪಡೆದಿದ್ದರು.ಆಗಿನಿಂದಲೂ ಮುಂಬೈ ಪರ ಆಡುತ್ತಿರುವಬೂಮ್ರಾರನೂರನೇ ವಿಕೆಟ್ ಕೂಡ ಕೊಹ್ಲಿಯೇ ಎಂಬುದು ವಿಶೇಷ.

ಎಂಟು ವರ್ಷ ಪೂರೈಸಿರುವ ಸಂಬಂಧ ಮೊದಲ ಪಂದ್ಯದ ಕೆಲವು ಚಿತ್ರಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಬೂಮ್ರಾ, ʼಎಂಟು ವರ್ಷಗಳ ಹಿಂದೆ ನಿನ್ನೆಯಂತೆ ಭಾಸವಾಗುತ್ತಿದೆ.ಮತ್ತೆ ಅಲ್ಲಿಗೆ ಹೋಗಲು ಕಾಯಲಾರೆʼಎಂದು ಬರೆದುಕೊಂಡಿದ್ದಾರೆ. ಆ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಡಲು ಕಾತರದಿಂದ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.

ಭಾರತ ತಂಡದ ಪ್ರಮುಖ ಬೌಲರ್ ಆಗಿಯೂ ಮಿಂಚುತ್ತಿರುವ ಬೂಮ್ರಾ ಐಪಿಎಲ್‌ನಲ್ಲಿ ಈವರೆಗೆ ಒಟ್ಟು 92 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. 7.42ರ ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟಿದ್ದು, ಬರೋಬ್ಬರಿ 109 ವಿಕೆಟ್‌ಗಳನ್ನು ಉರುಳಿಸಿದ್ದಾರೆ.

ಐಪಿಎಲ್-2021 ಟೂರ್ನಿಯು ಇದೇ ತಿಂಗಳ 9ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸೆಣಸಾಟ ನಡೆಸಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.