ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

IND vs AUS: ಜೈಸ್ವಾಲ್ -ಋತುರಾಜ್, ಇಶಾನ್ ಫಿಫ್ಟಿ, ಆಸೀಸ್‌ಗೆ 236 ರನ್ ಗುರಿ

Published 26 ನವೆಂಬರ್ 2023, 16:00 IST
Last Updated 26 ನವೆಂಬರ್ 2023, 16:00 IST
ಅಕ್ಷರ ಗಾತ್ರ

ತಿರುವನಂತಪುರ: ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ–20 ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ.

ಭಾರತದ ವಿರುದ್ಧ ಟಾಸ್‌ ಗೆದ್ದಿರುವ ಆಸ್ಟ್ರೇಲಿಯಾ, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 235 ರನ್ ಗಳಿಸಿದೆ.

ಆರಂಭಿಕ ಆಟಗಾರರಾದ ಋತುರಾಜ್ ಗಾಯಕವಾಡ್ 58, ಯಶಸ್ವಿ ಜೈಸ್ವಾಲ್ 53, ಇಶಾನ್ ಕಿಶನ್ 52, ಸೂರ್ಯಕುಮಾರ್ ಯಾದವ್ 19, ರಿಂಕು ಸಿಂಗ್ ಔಟಾಗದೆ 31, ತಿಲಕ್ ವರ್ಮಾ ಔಟಾಗದೆ 7 ರನ್ ಗಳಿಸಿದರು.

ಆಸ್ಟ್ರೇಲಿಯಾ ಪರ ನಥಾನ್ ಎಲ್ಲಿಸ್ 3, ಮಾರ್ಕಸ್‌ ಸ್ಟೋಯಿನಿಸ್ 1 ವಿಕೆಟ್ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT