ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2023ರ ಆವೃತ್ತಿ ಹರಾಜಿಗೆ ಲಭ್ಯರಿರುವ 405 ಆಟಗಾರರ ಪಟ್ಟಿ ಬಿಡುಗಡೆ

Last Updated 13 ಡಿಸೆಂಬರ್ 2022, 12:58 IST
ಅಕ್ಷರ ಗಾತ್ರ

ನವದೆಹಲಿ: ಐಪಿಎಲ್‌ 2023ರ ಆವೃತ್ತಿಯ ಹರಾಜಿಗೆ ಲಭ್ಯರಿರುವ 405 ಆಟಗಾರರ ಪಟ್ಟಿಯನ್ನು ಬಿಸಿಸಿಐ ಮಂಗಳವಾರ ಬಿಡುಗಡೆ ಮಾಡಿದೆ.

ಆರಂಭದಲ್ಲಿ 991 ಆಟಗಾರರಿದ್ದ ಪಟ್ಟಿ ಸದ್ಯ 405ಕ್ಕೆ ಇಳಿದಿದೆ.

405 ಆಟಗಾರರಲ್ಲಿ 273 ಭಾರತೀಯರು ಮತ್ತು 132 ವಿದೇಶಿ ಆಟಗಾರರು ಇದ್ದಾರೆ.

ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.

ಹರಾಜಿಗೆ ಲಭ್ಯರಿರುವ ಆಟಗಾರರಲ್ಲಿ ಅಫ್ಗಾನಿಸ್ತಾನದ ಸ್ಪಿನ್ನರ್‌, 15 ವರ್ಷದ ಅಲ್ಹಾ ಮೊಹಮ್ಮದ್‌ ಘಝನ್ಫರ್‌ ಅತ್ಯಂತ
ಕಿರಿಯ ಎನಿಸಿಕೊಂಡಿದ್ದಾರೆ. 2007ರ ಜುಲೈ 15ರಂದು ಜನಿಸಿರುವ ಘಝನ್ಫರ್‌ ಈ ವರೆಗೆ ಮೂರು ಟಿ20 ಕ್ರಿಕೆಟ್‌ ಪಂದ್ಯಗಳನ್ನು ಆಡಿದ್ದಾರೆ.

ಭಾರತದ, 40 ವರ್ಷದ ಅಮಿತ್‌ ಮಿಶ್ರಾ ಹರಾಜಿನಲ್ಲಿರುವ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಆಟಗಾರರ ಸಂಪೂರ್ಣ ಪಟ್ಟಿಗೆ ಇಲ್ಲಿ ಕ್ಲಿಕ್‌ ಮಾಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT