ಗುರುವಾರ , ಏಪ್ರಿಲ್ 15, 2021
20 °C

IPL 2021: ಆರ್‌ಸಿಬಿಗೆ ಫಿನ್ ಅಲೆನ್ ಸೇರ್ಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳುರು ತಂಡಕ್ಕೆ ನ್ಯೂಜಿಲೆಂಡ್‌ನ ವಿಕೆಟ್‌ಕೀಪರ್ ಫಿನ್ ಅಲೆನ್ ಅವರನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಆರ್‌ಸಿಬಿಯಲ್ಲಿದ್ದ ಜೋಶ್ ಫಿಲಿಪ್ ಅವರು ಈ ಬಾರಿ ಟೂರ್ನಿಗೆ ಅಲಭ್ಯರಾಗಿದ್ದಾರೆ. ಆದ್ದರಿಂದ ಅವರ ಸ್ಥಾನಕ್ಕೆ ಫಿನ್ ಅವಕಾಶ ಗಿಟ್ಟಿಸಿದ್ದಾರೆ. ಹೋದ ವರ್ಷದ ಟೂರ್ನಿಯಲ್ಲಿ ಆರ್‌ಸಿಬಿಯಲ್ಲಿ ಜೋಶ್ ಆಡಿದ್ದರು. ಐದು ಪಂದ್ಯಗಳಲ್ಲಿ 78 ರನ್ ಗಳಿಸಿದ್ದರು.

ಫಿನ್ ಅಲೆನ್‌ಗೆ ಇದು ಚೊಚ್ಚಲ  ಐಪಿಎಲ್ ಟೂರ್ನಿ. ನ್ಯೂಜಿಲೆಂಡ್‌ನಲ್ಲಿ 12 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ  ಫಿನ್ ಮೂರು ಅರ್ಧಶತಕ ಗಳಿಸಿದ್ದಾರೆ. ಅವರಿಗೆ ಮೂಲಬೆಲೆ 20 ಲಕ್ಷ ರೂಪಾಯಿ ನೀಡಿ ಖರೀದಿಸಲಾಗಿದೆ ಎಂದು ಐಪಿಎಲ್‌ ವೆಬ್‌ಸೈಟ್‌ ಪ್ರಕಟಿಸಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು