ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ20 ವಿಶ್ವಕಪ್ ಟೂರ್ನಿ: ಅಮೆರಿಕ ವಿಮಾನವೇರಿದ ರೋಹಿತ್ ಬಳಗ

Published 26 ಮೇ 2024, 13:56 IST
Last Updated 26 ಮೇ 2024, 13:56 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಕೆಲವು ಆಟಗಾರರು ಭಾನುವಾರ  ಮುಂಬೈನಿಂದ ಅಮೆರಿಕಕ್ಕೆ ಪ್ರಯಾಣಿಸಿದರು. 

ವಿಶ್ವಕಪ್ ಟೂರ್ನಿಯು ಜೂನ್ 2ರಿಂದ ಆರಂಭವಾಗಲಿದೆ. ವೆಸ್ಟ್ ಇಂಡೀಸ್ ಹಾಗೂ ಅಮೆರಿಕ  ಜಂಟಿ ಆತಿಥ್ಯ ವಹಿಸಲಿವೆ. 

ರೋಹಿತ್ ಜೊತೆಗೆ ಬ್ಯಾಟರ್ ಸೂರ್ಯಕುಮಾರ್ ಯಾದವ್, ವೇಗಿ ಜಸ್‌ಪ್ರೀತ್ ಬೂಮ್ರಾ, ಆಲ್‌ರೌಂಡರ್ ಶಿವಂ ದುಬೆ, ಸ್ಪಿನ್ನರ್ ಕುಲದೀಪ್ ಯಾದವ್, ರವೀಂದ್ರ ಜಡೇಜ, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವಿಕೆಟ್‌ಕೀಪರ್ ರಿಷಭ್ ಪಂತ್, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹಾಗೂ ಬ್ಯಾಟಿಂಗ್ ಕೋಚ್ ವಿಕ್ರಂ ರಾಥೋಡ್ ಈ ಪ್ರಯಾಣಿಸಿದರು.

ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಹಾಗೂ ಯಜುವೇಂದ್ರ ಚಾಹಲ್ ಅವರನ್ನೊಳಗೊಂಡ ಬ್ಯಾಚ್‌ ಇನ್ನಷ್ಟೇ ತೆರಳಬೇಕಿದೆ. 

ಭಾರತ ತಂಡವು ವಿಶ್ವಕಪ್ ಟೂರ್ನಿಯಲ್ಲಿ ಎ ಗುಂಪಿನಲ್ಲಿ ಆಡಲಿದೆ. ಜೂನ್ 5ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯವಾಡಲಿದ್ದು, ಐರ್ಲೆಂಡ್ ತಂಡವನ್ನು ಎದುರಿಸಲಿದೆ. 9ರಂದು ಪಾಕಿಸ್ತಾನ, 12ರಂದು ಅಮೆರಿಕ ಮತ್ತು 15 ರಂದು ಕೆನಡಾ ತಂಡಗಳ ವಿರುದ್ಧ ಭಾರತ ತಂಡವು ಆಡಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT