ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ-20 ವಿಶ್ವಕಪ್: ಅಮೆರಿಕಕ್ಕೆ ಪ್ರಯಾಣ ಬೆಳೆಸಿದ ಭಾರತ ತಂಡದ ಆಟಗಾರರು

Published 26 ಮೇ 2024, 2:46 IST
Last Updated 26 ಮೇ 2024, 2:46 IST
ಅಕ್ಷರ ಗಾತ್ರ

ನವದೆಹಲಿ: ಜೂನ್ 2 ರಂದು ಆರಂಭವಾಗಲಿರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು, ನಾಯಕ ರೋಹಿತ್ ಶರ್ಮಾ ಸೇರಿದಂತೆ ಭಾರತ ಕ್ರಿಕೆಟ್ ತಂಡದ ಆಟಗಾರರ ಮೊದಲ ಬ್ಯಾಚ್ ಶನಿವಾರ ಅಮೆರಿಕಕ್ಕೆ ಪ್ರಯಾಣಿಸಿತು.

ಜಸ್‌ಪ್ರೀತ್‌ ಬೂಮ್ರಾ, ಸೂರ್ಯಕುಮಾರ್‌ ಯಾದವ್‌, ರವೀಂದ್ರ ಜಡೇಜ, ಶಿವಂ ದುಬೆ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್‌, ಖಲೀಲ್ ಅಹಮದ್, ಕುಲದೀಪ್ ಯಾದವ್‌, ಅಕ್ಷರ್ ಪಟೇಲ್, ಮುಖ್ಯ ಕೋಚ್ ರಾಹುಲ್ ದ್ರಾವಿಡ್‌, ಬ್ಯಾಟಿಂಗ್ ಕೋಚ್ ವಿಕ್ರಂ ರಾಥೋಡ್‌ ವಿಮಾನ ಏರಿದರು.

ಐಪಿಎಲ್ ಪ್ಲೇ ಆಫ್‌ ತಲುಪಿದ ತಂಡಗಳಲ್ಲಿದ್ದ ಆಟಗಾರರು ಇನ್ನೊಂದು ಬ್ಯಾಚ್‌ನಲ್ಲಿ ಅಮೆರಿಕಕ್ಕೆ ಪ್ರಯಾಣಿಸಲಿದ್ದಾರೆ. ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಸಂಜು ಸಾಮ್ಸನ್, ಯುಜ್ವೆಂದ್ರ ಚಹಲ್ ಅವರು ಇನ್ನಷ್ಟೇ ತೆರಳಬೇಕಿದೆ.

ವೆಸ್ಟ್ ಇಂಡೀಸ್ ಹಾಗೂ ಅಮೆರಿಕದ ಜಂಟಿ ಆತಿಥ್ಯದಲ್ಲಿ ಈ ಬಾರಿಯ ಟಿ-20 ವಿಶ್ವಕಪ್ ನಡೆಯಲಿದೆ. ಭಾರತದ ಅಭಿಯಾನವು ಜೂನ್ 5 ರಂದು ನ್ಯೂಯಾರ್ಕ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ನಾಸ್ಸು ಕೌಂಟಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.

ಜೂನ್ 9ರಂದು ಪಾಕಿಸ್ತಾನವನ್ನು ಎದುರಿಸಲಿರುವ ಭಾರತವು, ಜೂ. 12 ರಂದು ಯುಎಸ್‌ಎ ಹಾಗೂ 15ಎಂದು ಕೆನಡಾ ವಿರುದ್ಧ ಆಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT